Saturday, June 6, 2026
Homeತಾಜಾ ಸುದ್ದಿಏರ್ ಪೋರ್ಟ್ ನಲ್ಲಿ ಪರಸ್ಪರ ಮುಖಾಮುಖಿಯಾದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಮಾಜಿ ಪ್ರಧಾನಿ ಹೆಚ್ಡಿಕೆ

ಏರ್ ಪೋರ್ಟ್ ನಲ್ಲಿ ಪರಸ್ಪರ ಮುಖಾಮುಖಿಯಾದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಮಾಜಿ ಪ್ರಧಾನಿ ಹೆಚ್ಡಿಕೆ

- Advertisement -
- Advertisement -

ಬೆಂಗಳೂರು: ಏರ್ ಪೋರ್ಟ್ ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಮಾಜಿ ಪ್ರಧಾನಿ ಹೆಚ್ಡಿಕೆ ಅನಿರೀಕ್ಷಿತವಾಗಿ ಪರಸ್ಪರ ಮುಖಾಮುಖಿಯಾಗಿದ್ದಾರೆ.

ಸಿಡಬ್ಲ್ಯುಸಿ ಸಭೆಯಲ್ಲಿ ಪಾಲ್ಗೊಳ್ಳಲು ದೆಹಲಿಗೆ ತೆರಳಲು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮಿಸಿದ್ದರು ಇದೇ ವೇಳೆ ಮಂಗಳೂರಿಗೆ ತೆರಳಲು ಆಗಮಿಸಿದ್ದ ಮಾಜಿ ಪ್ರಧಾನಿ ದೇವೇಗೌಡರು ಮತ್ತು ಇವರ ಧರ್ಮಪತ್ನಿ ಚನ್ನಮ್ಮ ಅವರು ಅನಿರೀಕ್ಷಿತವಾಗಿ ಮುಖಾಮುಖಿಯಾದರು.

ಈ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ದೇವೇಗೌಡರು ಮತ್ತು ಚನ್ನಮ್ಮ ಅವರ ಆರೋಗ್ಯ ವಿಚಾರಿಸಿದರು.‌ ಬಳಿಕ ದೇವೇಗೌಡರೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆರೋಗ್ಯ ವಿಚಾರಿಸಿದರು. ಕೆಲವು ಕಾಲ ಕುಶಲೋಪರಿ, ಮಾತುಕತೆ ಬಳಿಕ ಪರಸ್ಪರರು ಬೀಳ್ಕೊಟ್ಟರು.

ನಗರಾಭಿವೃದ್ಧಿ ಸಚಿವರಾದ ಬೈರತಿ ಸುರೇಶ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಈ ವೇಳೆ ಉಪಸ್ಥಿತರಿದ್ದರು.

- Advertisement -

Latest News

error: Content is protected !!