Tuesday, June 9, 2026
Homeಕರಾವಳಿವಿವೇಕ ಶಾಲಾ ಕೊಠಡಿಗಳ ಶಿಲಾನ್ಯಾಸ ಕಾರ್ಯಕ್ರಮ: ಶಿಲಾನ್ಯಾಸ ನೆರವೇರಿಸಿದ ಶಾಸಕ ಅಶೋಕ್ ಕುಮಾರ್ ರೈ

ವಿವೇಕ ಶಾಲಾ ಕೊಠಡಿಗಳ ಶಿಲಾನ್ಯಾಸ ಕಾರ್ಯಕ್ರಮ: ಶಿಲಾನ್ಯಾಸ ನೆರವೇರಿಸಿದ ಶಾಸಕ ಅಶೋಕ್ ಕುಮಾರ್ ರೈ

- Advertisement -
- Advertisement -

ವಿಟ್ಲ : ಸರಕಾರಿ ಪ್ರೌಢಶಾಲೆ(RMSA)ನ ವಿವೇಕ ಶಾಲಾ ಕೊಠಡಿಗಳ ಶಿಲಾನ್ಯಾಸ ಕಾರ್ಯಕ್ರಮವು ಶಾಸಕ ಅಶೋಕ್ ಕುಮಾರ್ ರೈ ಅವರ ನೇತೃತ್ವದಲ್ಲಿ ಜರಗಿತು.

ಈ ಸಂದರ್ಭಧಲ್ಲಿ ಮಾತನಾಡಿದ ಅಶೋಕ್ ಕುಮಾರ್ ರೈ, ರಾಜ್ಯದಲ್ಲಿ ಅತ್ಯಧಿಕ ಸಂಖ್ಯೆಯಲ್ಲಿ ವಿದ್ಯಾರ್ಥಿಗಳಿರುವ ಸರ್ಕಾರಿ ಶಾಲೆಗಳಿಗೆ ಬೇಕಾದ ಸವಲತ್ತುಗಳನ್ನು ಒದಗಿಸುವ ವ್ಯವಸ್ಥೆ ಮಾಡುವುದು ಶಾಸಕರ ಕರ್ತವ್ಯ. ಸರ್ಕಾರಿ ಶಾಲೆಗಳಲ್ಲಿ ಗುಣಾತ್ಮಕ ಶಿಕ್ಷಣ ದೊರೆತು ಉತ್ತಮ ವಿದ್ಯಾರ್ಥಿಗಳು ಹೊರಬರುವಂತಾಗಲಿ ಎಂದು ಹಾರೈಸಿದರು.

ಶಾಸಕರ ವತಿಯಿಂದ ಶಾಲೆಗೆ ಬಂದಂತಹ ವಿವಿಧ ಸವಲತ್ತುಗಳ ಮಾಹಿತಿಯನ್ನು ಶಾಲಾ ಗೌರವಾಧ್ಯಕ್ಷ ಸುಬ್ರಾಯ ಪೈ ಅವರು ತಿಳಿಸಿದರು.

ಕಾರ್ಯಕ್ರಮದಲ್ಲಿ ಬಂಟ್ವಾಳದ ಶಾಲಾ ಶಿಕ್ಷಣ ಇಲಾಖೆಯ ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುನಾಥನ್, ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರುಗಳಾದ ಶಾರದಾ ಮತ್ತು ರವಿಶಂಕರ ಶಾಸ್ತ್ರಿ ಇತರ ಸದಸ್ಯರು, ಪಟ್ಟಣ ಪಂಚಾಯಿತಿಯ ಸದಸ್ಯರಾದ ಗೋಪಿಕೃಷ್ಣ ಅಶ್ರಫ್, ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷ ರಮಾನಾಥ ವಿಟ್ಲ ಪಂಚಾಯತ್ ರಾಜ್ ಇಲಾಖೆಯ ಇಂಜಿನಿಯರ್ ನಾಗೇಶ್, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ವಾರಿಜಾಕುಮಾರಿ, ನಿವೃತ್ತ ಮುಖ್ಯ ಶಿಕ್ಷಕಿ ಪುಷ್ಪಾ, ಇಂಜಿನಿಯರ್ ರಾಘವೇಂದ್ರ ಪೈ, ಪ್ರೌಢಶಾಲೆಯ ವಿದ್ಯಾರ್ಥಿಗಳು ಹಾಗೂ ಸಹಶಿಕ್ಷಕರು ಉಪಸ್ಥಿತರಿದ್ದರು. ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಅನ್ನಪೂರ್ಣಾ ಸ್ವಾಗತಿಸಿ, ವಂದಿಸಿದರು.

- Advertisement -

Latest News

error: Content is protected !!