Saturday, June 6, 2026
Homeಕರಾವಳಿಮಂಗಳೂರು; ನಾಲ್ಕು ತಿಂಗಳ ಹಿಂದೆ ವಿವಾಹವಾಗಿದ್ದ ಮಹಿಳೆ ಪುಣೆಯಲ್ಲಿ ಅನುಮಾನಾಸ್ಪದವಾಗಿ ಸಾವು

ಮಂಗಳೂರು; ನಾಲ್ಕು ತಿಂಗಳ ಹಿಂದೆ ವಿವಾಹವಾಗಿದ್ದ ಮಹಿಳೆ ಪುಣೆಯಲ್ಲಿ ಅನುಮಾನಾಸ್ಪದವಾಗಿ ಸಾವು

- Advertisement -
- Advertisement -

ಮಂಗಳೂರು; ನಾಲ್ಕು ತಿಂಗಳ ಹಿಂದೆ ವಿವಾಹವಾಗಿದ್ದ ಮಹಿಳೆಯೊಬ್ಬಳು ಪುಣೆಯಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಉಳ್ಳಾಲ ತೌಡುಗೋಳಿ ನಿವಾಸಿ ಸದ್ಯ ಪುಣೆಯಲ್ಲಿ ವಾಸವಾಗಿದ್ದ ಸುಜಾತ ಶೆಟ್ಟಿ (38) ಮೃತ ದುರ್ದೈವಿ.

ತೌಡುಗೋಳಿ ಕ್ರಾಸ್ ಗುರಿಕಾರಮೂಲೆ ನಿವಾಸಿ ನಾರಾಯಣ ಶೆಟ್ಟಿ ಅವರ ಪುತ್ರಿ ಸುಜಾತ ಶೆಟ್ಟಿ ಅವರನ್ನು ಪಜೀರು ಪಾನೇಲ ನಿವಾಸಿ ಪುಣೆಯಲ್ಲಿ ಕ್ಯಾಂಟೀನ್ ನಡೆಸುತ್ತಿದ್ದ ಸುರೇಶ್ ಕೈಯ್ಯ ಎಂಬವರಿಗೆ ನಾಲ್ಕು ತಿಂಗಳ ಹಿಂದೆಯಷ್ಟೇ ಸುಜಾತಾ ಅವರನ್ನು ವಿವಾಹ ಮಾಡಿಕೊಡಲಾಗಿತ್ತು.ಅ.8 ರಂದು ಸುಜಾತ ಮೃತದೇಹ ಭಾರತೀಯ ವಿದ್ಯಾಪೀಠದಲ್ಲಿರುವ ಮನೆಯೊಳಗೆ ಅನುಮಾನಸ್ಪವಾಗಿ ಕಂಡುಬಂದಿತ್ತು.

ಈ ಬಗ್ಗೆ ಅಲ್ಲಿನ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಮೃತದೇಹವನ್ನು ಶವ ಮಹಜರಿಗೆ ಕಳುಹಿಸಲಾಗಿತ್ತು.ಅ.9 ರಂದು ತೌಡುಗೋಳಿ ಸಮೀಪ ಸುಜಾತ ಅವರ ಅಂತಿಮ ಸಂಸ್ಕಾರ ನೆರವೇರಿದ್ದು, ಮನೆಮಂದಿ ಸುರೇಶ್ ವಿರುದ್ಧ ಅನುಮಾನ ವ್ಯಕ್ತಪಡಿಸಿದ್ದಾರೆ.ಶವಮಹಜರು ವರದಿ ಬಂದ ಬಳಿಕವಷ್ಟೇ ಪ್ರಕರಣದ ಸತ್ಯಾಸತ್ಯತೆ ಹೊರಬೀಳಲಿದೆ.ಸುಜಾತಾ ಅವರು ತೊಕ್ಕೊಟ್ಟು ಬ್ಯೂಟಿಪಾರ್ಲರ್ ನಲ್ಲಿ ಈ ಹಿಂದೆ ಬ್ಯೂಟೀಷಿಯನ್ ಆಗಿ ಕೆಲಸ‌ನಿರ್ವಹಿಸುತ್ತಿದ್ದರು.

- Advertisement -

Latest News

error: Content is protected !!