Thursday, June 4, 2026
Homeಕರಾವಳಿಬಂಟ್ವಾಳ;  ಬಸ್ ಇಳಿದು ಮನೆಗೆ ತೆರಳುತ್ತಿದ್ದಾಗ ಮೇಲೆರಗಿದ ಕಾರು; ಯುವತಿ ಸ್ಥಳದಲ್ಲೇ ಸಾವು

ಬಂಟ್ವಾಳ;  ಬಸ್ ಇಳಿದು ಮನೆಗೆ ತೆರಳುತ್ತಿದ್ದಾಗ ಮೇಲೆರಗಿದ ಕಾರು; ಯುವತಿ ಸ್ಥಳದಲ್ಲೇ ಸಾವು

- Advertisement -
- Advertisement -

ಬಂಟ್ವಾಳ: ಬಸ್ ಇಳಿದು ಮನೆಗೆ ತೆರಳುತ್ತಿದ್ದಾಗ ಕಾರು ಡಿಕ್ಕಿ ಹೊಡೆದು ಪಾದಚಾರಿ ಯುವತಿ ಮೃತಪಟ್ಟ ಘಟನೆ ಗುರುವಾರ ಸಂಜೆ ಸುಮಾರು 6.30 ಕ್ಕೆ ರಾಷ್ಟ್ರೀಯ ಹೆದ್ದಾರಿ 75 ರ ಬಂಟ್ವಾಳದ ಕಲ್ಲಡ್ಕ ಸಮೀಪದ ದಾಸಕೋಡಿ ಎಂಬಲ್ಲಿ ನಡೆದಿದೆ.ವೀರಕಂಭ ಗ್ರಾಮದ ಬಾಯಿಲ ನಿವಾಸಿ ಶೇಖರ ಪೂಜಾರಿ ಅವರ ಪುತ್ರಿ ಪಾವನ ( 23) ಮೃತಪಟ್ಟ ಯುವತಿ.

ಬಿಸಿರೋಡಿನ ಸ್ಕ್ಯಾನಿಂಗ್ ಸೆಂಟರ್ ನಲ್ಲಿ ಕೆಲಸ ಮಾಡುತ್ತಿದ್ದ ಯುವತಿ ಸಂಜೆ ಕೆಲಸ ಬಿಟ್ಟು ಬಿಸಿರೋಡಿನಿಂದ ಬಸ್ ನಲ್ಲಿ ಮನೆಗೆ ಹೋಗಿದ್ದಳು.ಯುವತಿ ದಾಸಕೋಡಿ ಎಂಬಲ್ಲಿ ಬಸ್  ನಿಂದ ಇಳಿದು ಹೆದ್ದಾರಿ ಬದಿಯಲ್ಲಿ ನಡೆದುಕೊಂಡು ಹೋಗುವ ವೇಳೆ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಯುವತಿ ರಸ್ತೆ ಬದಿಯ ತೋಡಿಗೆ ಎಸೆಯಲ್ಪಟ್ಟಿದ್ದು ಕಾರು ಕೂಡ ಪಲ್ಟಿಯಾಗಿದೆ ಎಂದು ಹೇಳಲಾಗಿದೆ.

ಯುವತಿಯ ಮೃತದೇಹವನ್ನು ಮರಣೋತ್ತರ ಪರೀಕ್ಷೆ ಗಾಗಿ ಬಂಟ್ವಾಳ ಸರಕಾರಿ ಆಸ್ಪತ್ರೆಯ ಶವಗಾರದಲ್ಲಿಡಲಾಗಿದೆ.3ಘಟನಾ ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಪೋಲೀಸರು ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

- Advertisement -

Latest News

error: Content is protected !!