Tuesday, July 1, 2025
Homeಕರಾವಳಿಉಡುಪಿಉಡುಪಿ: ನಾಪತ್ತೆಯಾಗಿದ್ದ ಯುವತಿ ಶವವಾಗಿ ಪತ್ತೆ

ಉಡುಪಿ: ನಾಪತ್ತೆಯಾಗಿದ್ದ ಯುವತಿ ಶವವಾಗಿ ಪತ್ತೆ

spot_img
- Advertisement -
- Advertisement -

ಉಡುಪಿ : ಮೂಡುಬೆಳ್ಳೆ ಕೊಂಗಿಬೈಲು ಎಂಬಲ್ಲಿಂದ ನಾಪತ್ತೆಯಾಗಿದ್ದ ವಿನಿತಾ (22) ಎಂಬ ಯುವತಿ ಶವವಾಗಿ ಪತ್ತೆಯಾಗಿದ್ದಾಳೆ. ವಿನಿತಾ ಮೃತದೇಹ ಶಿರ್ವ ಪೊಲೀಸ್‌ ಠಾಣಾ ವ್ಯಾಪ್ತಿಯ ಪಡುಬೆಳ್ಳೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಮೀಪದ ಸೇತುವೆಯ ಬಳಿ ಪಾಪನಾಶಿನಿ ನದಿಯ ಗುಂಡಿಯಲ್ಲಿ ಪತ್ತೆಯಾಗಿದೆ.
ವಿನಿತಾ ಅಕ್ಟೋಬರ್ 9ರಂದು ಮಧ್ಯಾಹ್ನ 3 ಗಂಟೆಗೆ ತನ್ನ ಮನೆಯಿಂದ ಉಡುಪಿಗೆ ಹೋಗುತ್ತೇನೆ ಎಂದು ಹೋದವಳು ಮತ್ತೆ ವಾಪಾಸ್ ಮನೆ ಬಂದಿಲ್ಲ. ಈ ಹಿನ್ನಲೆ ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಬಿ.ಕಾಂ. ಪದವೀಧರೆಯಾಗಿದ್ದ ಆಕೆ ಉಡುಪಿ ಎಂಜಿಎಂ ಕಾಲೇಜ್‌ ಬಳಿಯ ಎಲೆಕ್ಟ್ರಿಕಲ್‌ ಬೈಕ್‌ ಶೋ ರೂಂನಲ್ಲಿ ಸುಮಾರು 4 ತಿಂಗಳಿನಿಂದ ಕೆಲಸ ಮಾಡಿಕೊಂಡಿದ್ದರು. ವಾರದ ಹಿಂದೆ ಕೆಲಸ ಬಿಟ್ಟಿದ್ದರು.
ಶಿರ್ವ ಪೊಲೀಸ್‌ ಠಾಣಾಧಿಕಾರಿ ಸಕ್ತಿವೇಲು ಮತ್ತು ಕ್ರೈಂ ವಿಭಾಗದ ಪಿಎಸ್‌ಐ ಅನಿಲ್‌ ಕುಮಾರ್‌ ಸ್ಥಳದಲ್ಲಿದ್ದು ತನಿಖೆ ಮುಂದುವರಿಸಿದ್ದಾರೆ.

- Advertisement -
spot_img

Latest News

error: Content is protected !!