Saturday, June 6, 2026
Homeಕರಾವಳಿಬಂಟ್ವಾಳದಲ್ಲಿ ಅಕ್ರಮ ಕೆಂಪುಕಲ್ಲು ಗಣಿಗಾರಿಕೆ; ಕಂಡತಟ್ಟು ಗುಡ್ಡಕ್ಕೆ ಪೊಲೀಸರ ದಾಳಿ  

ಬಂಟ್ವಾಳದಲ್ಲಿ ಅಕ್ರಮ ಕೆಂಪುಕಲ್ಲು ಗಣಿಗಾರಿಕೆ; ಕಂಡತಟ್ಟು ಗುಡ್ಡಕ್ಕೆ ಪೊಲೀಸರ ದಾಳಿ  

- Advertisement -
- Advertisement -

ಬಂಟ್ವಾಳ: ತಾಲೂಕಿನ ಮಂಚಿ ಮುಡಿಪು ರಸ್ತೆಯ ಕಂಡತಟ್ಟು ಗುಡ್ಡ ಎಂಬಲ್ಲಿ ಅಕ್ರಮವಾಗಿ ಕೆಂಪುಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ವೇಳೆ ಸ್ಥಳಕ್ಕೆ ಸಿ.ಇ.ಎನ್ ಅಪರಾಧ ಪೊಲೀಸ್ ಠಾಣೆಯ ಪೊಲೀಸ್ ಉಪ ನಿರೀಕ್ಷಕರು ಹಾಗೂ ಸಿಬ್ಬಂದಿಗಳು ದಾಳಿ ನಡೆಸಿದ ಘಟನೆ ನಡೆದಿದೆ.

ಯಾವುದೇ ಪರವಾನಿಗೆ ಇಲ್ಲದೇ ಕಂಡತಟ್ಟು ಗುಡ್ಡ ಎಂಬಲ್ಲಿ ಅಕ್ರಮವಾಗಿ ಕೆಂಪುಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ವೇಳೆಗೆ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ದಾಳಿ ನಡೆಸಿದ್ದಾರೆ. 

ದಾಳಿ ನಡೆದ ಪರಿಣಾಮ ಕೃತ್ಯದಲ್ಲಿ ತೊಡಗಿದ್ದ ಆರೋಪಿಗಳು ಕೆಂಪು ಕಲ್ಲು ಗಣಿಗಾರಿಕೆಗೆ ಬಳಸುತ್ತಿರುವ ಯಂತ್ರವನ್ನು ಸ್ಥಳದಲ್ಲಿಯೇ ಬಿಟ್ಟು ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ. ಇನ್ನು ಯಂತ್ರವನ್ನು ವಶಕ್ಕೆ ಪಡೆದಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಈ ಕುರಿತು ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ. 

- Advertisement -

Latest News

error: Content is protected !!