Sunday, June 7, 2026
Homeಕರಾವಳಿಬೆಳ್ತಂಗಡಿಯಲ್ಲಿ ಟಿಪ್ಪರ್ ಲಾರಿಗೆ ಟೆಂಪೋ ಟ್ರಾವೆಲರ್ ಡಿಕ್ಕಿ

ಬೆಳ್ತಂಗಡಿಯಲ್ಲಿ ಟಿಪ್ಪರ್ ಲಾರಿಗೆ ಟೆಂಪೋ ಟ್ರಾವೆಲರ್ ಡಿಕ್ಕಿ

- Advertisement -
- Advertisement -

ಬೆಳ್ತಂಗಡಿ: ಗುರುವಾಯನಕೆರೆಯಿಂದ ಬೆಳ್ತಂಗಡಿ ಕಡೆಗೆ ಜೆಸಿಬಿ ಹೊತ್ತು ಸಾಗುತ್ತಿದ್ದ ಟಿಪ್ಪರ್ ಲಾರಿಗೆ ಟೆಂಪೋ ಟ್ರಾವೆಲರ್ ಡಿಕ್ಕಿ ಹೊಡೆದಿದ್ದು, ಕೆಲವರಿಗೆ ಸಣ್ಣಪುಟ್ಟ ಗಾಯಗಳಾದ ಘಟನೆಯು ಅ.21ರಂದು ಬೆಳಗ್ಗೆ ಬೆಳ್ತಂಗಡಿಯ ಗುರುವಾಯನಕೆರೆ ಬಳಿಯಲ್ಲಿ ನಡೆದಿದೆ.

ಗುರುವಾಯನಕೆರೆ ಸಮೀಪದ ಮೇಲಂತಬೆಟ್ಟು ಕ್ರಾಸ್ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಜೆಸಿಬಿ ಹೊತ್ತು ಸಾಗುತ್ತಿದ್ದ ಟಿಪ್ಪರ್ ಗೆ ಎದುರುಗಡೆಯಿಂದ ಬರುತ್ತಿದ್ದ ಟೆಂಪೋ ಟ್ರಾವೆಲರ್ ವಾಹನವು ಡಿಕ್ಕಿ ಹೊಡೆದಿದೆ. ಘಟನೆಯ ವೇಳೆ ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಲಾರಿಯ ಒಂದು ಬದಿ ಸಂಪೂರ್ಣ ನಜ್ಜುಗುಜ್ಜಾಗಿದೆ ಎನ್ನಲಾಗಿದೆ.

ಇನ್ನು ಘಟನೆ ನಡೆದ ಪ್ರದೇಶದಲ್ಲಿ ರಸ್ತೆ ಸಂಚಾರ ಸಂಪೂರ್ಣ ಬಂದ್ ಆಗಿದ್ದು, ಅಲ್ಲಿದ್ದ ವಾಹನಗಳು ಸುಮಾರು 1 ಗಂಟೆಗಿಂತಲೂ ಹೆಚ್ಚು ಹೊತ್ತು ಸಾಲಿನಲ್ಲಿ ನಿಲ್ಲಬೇಕಾಯಿತು.

- Advertisement -

Latest News

error: Content is protected !!