Wednesday, June 3, 2026
Homeಕರಾವಳಿಪವರ್ ಟಿವಿ ಎಂಡಿ ರಾಕೇಶ್ ಶೆಟ್ಟಿ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ದೂರು ದಾಖಲು

ಪವರ್ ಟಿವಿ ಎಂಡಿ ರಾಕೇಶ್ ಶೆಟ್ಟಿ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ದೂರು ದಾಖಲು

- Advertisement -
- Advertisement -

ಬೆಳ್ತಂಗಡಿ: ಪವರ್ ಟಿವಿ ಎಂಡಿ ರಾಕೇಶ್ ಶೆಟ್ಟಿ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ದೂರು ದಾಖಲಾಗಿದೆ.ಕಾರ್ಕಳದಲ್ಲಿ ನಡೆದ ಧರ್ಮಸಂರಕ್ಷಣಾ ಸಮಾವೇಶದಲ್ಲಿ ಮಾಜಿ ಶಾಸಕ ವಸಂತ ಬಂಗೇರ ಅವರನ್ನು ನಿಂದಿಸಿ ಜೀವ ಬೇದರಿಕೆ ಹಾಕಿರುವ ಬಗ್ಗೆ ರಾಕೇಶ್ ಶೆಟ್ಟಿ ವಿರುದ್ಧ ವಸಂತ ಬಂಗೇರ ಅವರ ಅಭಿಮಾನಿಗಳು ಬೆಳ್ತಂಗಡಿ ಪೊಲೀಸ್ ಠಾಣೆಗೆ ಶುಕ್ರವಾರ ದೂರು ನೀಡಿದ್ದಾರೆ.


ಕಾರ್ಕಳದ ಕುಕ್ಕುಂದೂರಿನಲ್ಲಿ ನಡೆದ ಧರ್ಮ ಸಂರಕ್ಷಣಾ ಸಮಾವೇಶದಲ್ಲಿ ಪವರ್ ಟಿವಿ ಎಂಡಿ ರಾಕೇಶ್ ಶೆಟ್ಟಿ ದಿಕ್ಸೂಚಿ ಭಾಷಣದಲ್ಲಿ ಮಾಜಿ ಶಾಸಕ ವಸಂತ ಬಂಗೇರ ಅವರನ್ನು ಅವಾಚ್ಯವಾಗಿ ನಿಂದಿಸಿದ್ದಲ್ಲದೆ ಜೀವ ಬೆದರಿಕೆ ಒಡ್ಡಿದ್ದಾನೆ. ಅಲ್ಲದೆ ತನ್ನ ಮಾತುಗಳಿಂದ ಸಮಾಜದಲ್ಲಿ ತಪ್ಪು ಅಭಿಪ್ರಾಯ ಮೂಡುವಂತೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ.

ಬೆಳ್ತಂಗಡಿಯ ಹಾಗೂ ಉಜಿರೆಯ ಎಲ್ಲ ಜನರೂ ಪಾಪಿಗಳು, ನಾಚಿಕೆ ಇಲ್ಲದವರು ಎಂಬ ರೀತಿಯಲ್ಲಿ ಮಾತನಾಡಿದ್ದಾನೆ. ಇದರಿಂದಾಗಿ ತನಗೆ ಹಾಗೂ ಬಂಗೇರ ಅಭಿಮಾನಿಗಳಿಗೆ ತೀವ್ರ ಆಘಾತವಾಗಿದೆ. ಆದ್ದರಿಂದ ಈ ಬಗ್ಗೆ ಸಮರ್ಪಕವಾದ ತನಿಖೆ ನಡೆಸಿ ರಾಕೇಶ್ ಶೆಟ್ಟಿ ವಿರುದ್ಧ ಕೂಡಲೇ ನೀಡಿದ ದೂರಿನಲ್ಲಿ ಆರೋಪಿಸಿದ್ದಾರೆ.

- Advertisement -

Latest News

error: Content is protected !!