Wednesday, June 3, 2026
Homeಕರಾವಳಿಉಡುಪಿಉಡುಪಿ; ನದಿಗೆ ಸ್ನಾನಕ್ಕೆಂದು ಹೋದ ಇಬ್ಬರು ನೀರು ಪಾಲು

ಉಡುಪಿ; ನದಿಗೆ ಸ್ನಾನಕ್ಕೆಂದು ಹೋದ ಇಬ್ಬರು ನೀರು ಪಾಲು

- Advertisement -
- Advertisement -

ಉಡುಪಿ; ನದಿಗೆ ಸ್ನಾನಕ್ಕೆಂದು ಹೋದ ಇಬ್ಬರು ನೀರು ಪಾಲಾದ ಘಟನೆ ಉಡುಪಿಯ ಹೆಬ್ರಿ ಸಮೀಪದ ಕಬ್ಬಿನಾಲೆ ಮತ್ತಾವು ಎಂಬಲ್ಲಿ ಅ. 21ರಂದು ನಡೆದಿದೆ.

ಕರ್ಜೆ ನಿವಾಸಿ ಉಮೇಶ್ ಶೆಟ್ಟಿ (48) ಹಾಗೂ ಇಂಜಿನಿಯರಿಂಗ್ ವಿದ್ಯಾರ್ಥಿ ಚಾರ ಹುರ್ತುರ್ಕೆ ನಿವಾಸಿ ಪ್ರಸ್ತುತ್ ಹೆಗ್ಡೆ (21) ಮೃತರು. ಇಬ್ಬರು ಅ. 21ರಂದು ಸಂಜೆ 3 ಗಂಟೆಗೆ ಸ್ನಾನಕ್ಕೆಂದು ಮತ್ತಾವು ನದಿಗೆ ತೆರಳಿದ್ದರು. ಸಂಜೆಯಾದರೂ ಮನೆಗೆ ಬಾರದ ಹಿನ್ನೆಲೆಯಲ್ಲಿ ಮನೆಯವರು ಇವರ ಮೊಬೈಲ್ ಪೋನ್ ಗೆ ಕರೆ ಮಾಡಿದ್ದಾರೆ. ಆದರೆ ಕರೆ ಸ್ವೀಕರಿಸದ ಕಾರಣ ಮೊಬೈಲ್ ಮೂಲಕ ಇವರ ಲೋಕೇಶನ್ ಪತ್ತೆ ಹಚ್ಚಿ ಹುಡುಕಾಟ ನಡೆಸಿದ್ದರು. ರಾತ್ರಿ 10:30ರ ಸುಮಾರಿಗೆ ಅವರಿಬ್ಬರ ಮೃತದೇಹಗಳು ಪತ್ತೆಯಾಗಿವೆ ಎಂದು ತಿಳಿದುಬಂದಿದೆ.

ಈ ಬಗ್ಗೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!