Saturday, June 13, 2026
Homeಕರಾವಳಿಮಂಗಳೂರು: ಹುಲಿಕುಣಿತದ ವೇಳೆ ಆಯತಪ್ಪಿ ಬಿದ್ದ ಹುಲಿ ವೇಷಧಾರಿ

ಮಂಗಳೂರು: ಹುಲಿಕುಣಿತದ ವೇಳೆ ಆಯತಪ್ಪಿ ಬಿದ್ದ ಹುಲಿ ವೇಷಧಾರಿ

- Advertisement -
- Advertisement -

ಮಂಗಳೂರು: ಹುಲಿಕುಣಿತದ ವೇಳೆ ಹುಲಿ ವೇಷಧಾರಿಯೊಬ್ಬರು ಆಯತಪ್ಪಿ ಬಿದ್ದು ಗಾಯಗೊಂಡ ಘಟನೆ ಮಂಗಳಾದೇವಿ ದೇವಸ್ಥಾನದ ವಠಾರದಲ್ಲಿ ನಡೆದಿದೆ.

ಮಂಗಳಾದೇವಿಯ ಎದುರು ಮುಳಿಹಿತ್ಲು ಎಂಬಲ್ಲಿನ ಹುಲಿವೇಷ ತಂಡದ ಕುಣಿತದ ನಡೆಯುತ್ತಿದ್ದಾಗ  ಹುಲಿವೇಷಧಾರಿಯೊಬ್ಬರು ರಿವರ್ಸ್ ಪಲ್ಟಿ ಹೊಡೆಯುತ್ತಿದ್ದರು. ಈ ವೇಳೆ ಆಯ ತಪ್ಪಿ ತಲೆ ನೆಲಕ್ಕೆ ಬಡಿದು ಅನಾಹುತ ನಡೆದಿದೆ. ತಲೆ ನೆಲಕ್ಕೆ ಬಡಿದು ಕತ್ತು ಉಳುಕಿದ ಪರಿಣಾಮ ಹುಲಿವೇಷಧಾರಿಗೆ ಗಾಯವಾಗಿದ್ದು, ತಕ್ಷಣ ಆಸ್ಪತ್ರೆಗೆ ದಾಖಲಿಸಿ ಹುಲಿವೇಷಧಾರಿ ಯುವಕನಿಗೆ ಚಿಕಿತ್ಸೆ ನೀಡಲಾಗಿದೆ.

ಸದ್ಯ ಸಣ್ಣ ಗಾಯಗಳೊಂದಿಗೆ ಅಪಾಯದಿಂದ ಯುವಕ ಪಾರಾಗಿದ್ದಾರೆ. ಸದ್ಯ ಘಟನೆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

- Advertisement -

Latest News

error: Content is protected !!