Saturday, June 6, 2026
Homeಕರಾವಳಿಮಂಗಳೂರುಬೆಳ್ತಂಗಡಿ : ಪಾದಯಾತ್ರೆ ನಿಲ್ಲಿಸುವ ಒಳಸಂಚಿನಿಂದ ಉಜಿರೆಯಲ್ಲಿ ಬ್ಯಾನರ್ ಅಳವಡಿಕೆ ಆರೋಪ;  ಮಹೇಶ್ ಶೆಟ್ಟಿ ತಿಮರೋಡಿ...

ಬೆಳ್ತಂಗಡಿ : ಪಾದಯಾತ್ರೆ ನಿಲ್ಲಿಸುವ ಒಳಸಂಚಿನಿಂದ ಉಜಿರೆಯಲ್ಲಿ ಬ್ಯಾನರ್ ಅಳವಡಿಕೆ ಆರೋಪ;  ಮಹೇಶ್ ಶೆಟ್ಟಿ ತಿಮರೋಡಿ ಸೇರಿ ಎಂಟು ಜನರ ಮೇಲೆ ಪ್ರಕರಣ ದಾಖಲು

- Advertisement -
- Advertisement -

ಬೆಳ್ತಂಗಡಿ : ಬೆಳ್ತಂಗಡಿ ಠಾಣಾ ವ್ಯಾಪ್ತಿಯಲ್ಲಿ ನಡೆದ ಧರ್ಮಸಂರಕ್ಷಣಾ ಯಾತ್ರೆಯ ಸಲುವಾಗಿ, ಸಂಬಂಧಪಟ್ಟ ಇಲಾಖೆಯಿಂದ ಅನುಮತಿ ಪಡೆದು ಯಾತ್ರೆಗೆ ಬೆಂಬಲ ಸೂಚಿಸಿ ಅಳವಡಿಸಲಾಗಿದ್ದ ಬ್ಯಾನರ್  ಗಳ ಪಕ್ಕದಲ್ಲೇ, ಪಾದಯಾತ್ರೆಯನ್ನು ನಿಲ್ಲಿಸುವ ಒಳಸಂಚಿನಿಂದ ಪ್ರಾದೇಶಿಕ  ಗುಂಪುಗಳ ನಡುವಣ ಸೌಹಾರ್ದಕ್ಕೆ ಬಾಧಕವಾಗುವಂತಹ ಬರವಣೆಗೆಗಳನ್ನು ಹೊಂದಿರುವ ಬ್ಯಾನರ್ ಗಳನ್ನು ಅಳವಡಿಸಿ, ಪ್ರಾದೇಶಿಕ ಗುಂಪುಗಳ ನಡುವೆ ವೈರತ್ವ, ದ್ವೇಷ ,ವೈಮನಸ್ಸು ಭಾವನೆಗಳನ್ನು ಬಿತ್ತಿಸಿ ಅಸೌಹಾರ್ತೆದಯನ್ನು ಸೃಷ್ಟಿಸಿರುವುದಾಗಿ ಮಹೇಶ್ ಶೆಟ್ಟಿ ತಿಮರೋಡಿ ಸೇರಿ 8 ಜನರ ವಿರುದ್ಧ ಸಂದೀಪ್ ರೈ ಎಂಬವರು ದೂರು ನೀಡಿದ್ದಾರೆ.

ಅದರಂತೆ ಆರೋಪಿಗಳಾದ ಮಹೇಶ್ ಶೆಟ್ಟಿ ತಿಮರೋಡಿ, ಅನಿಲ್ ಕುಮಾರ್ ಅಂತರ, ಕಿರಣ್ ಗೌಡ, ಪ್ರಜ್ವಲ್ ಕೆ ವಿ ಗೌಡ, ಮನೋಹರ್ ಮನ್ನಡ್ಕ,ಮನೋಜ್ ಸಾಲ್ಯಾನ್ ಕುಂಜರ್ಪ, ಮತ್ತು ಇತರರ ವಿರುದ್ದ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

- Advertisement -

Latest News

error: Content is protected !!