Friday, June 27, 2025
Homeಅಪರಾಧಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆಟೋ ಚಾಲಕ; ಆರೋಪಿ ಆಟೋ ಚಾಲಕನ ವಿರುದ್ಧ ಪ್ರಕರಣ...

ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆಟೋ ಚಾಲಕ; ಆರೋಪಿ ಆಟೋ ಚಾಲಕನ ವಿರುದ್ಧ ಪ್ರಕರಣ ದಾಖಲು

spot_img
- Advertisement -
- Advertisement -

ಕಡಬ: ಪಂಜದ ಕಾಲೇಜು ವಿದ್ಯಾರ್ಥಿನಿಯೋರ್ವಳನ್ನು ಪ್ರೀತಿಯ ಹೆಸರಿನಲ್ಲಿ ವಂಚಿಸಿ, ಅತ್ಯಾಚಾರವೆಸಗಿದ ಆರೋಪದಲ್ಲಿ ಆಟೋ ಚಾಲಕನ ವಿರುದ್ಧ ಕಡಬ ತಾಲೂಕಿನ ಸುಬ್ರಹ್ಮಣ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸುಳ್ಯ ತಾಲೂಕಿನ ಬೆಳ್ಳಾರೆಯ ಆಟೋ ಚಾಲಕ ಮಹೇಶ್ ಎಂಬಾತ ಆರೋಪಿ. ಈತ ಪಂಜದ ಪಿಯುಸಿ ವಿದ್ಯಾರ್ಥಿನಿಯನ್ನು ಪುಸಲಾಯಿಸಿ ಲಾಡ್ಜ್‌ ನಲ್ಲಿ ಲೈಂಗಿಕವಾಗಿ ಬಳಸಿಕೊಂಡಿದ್ದಾನೆ ಎಂಬುದು ವಿದ್ಯಾರ್ಥಿನಿಯ ಪೋಷಕರ ಆರೋಪ. ವಿದ್ಯಾರ್ಥಿನಿಯನ್ನು ಪ್ರೀತಿಸುವ ನಾಟಕವಾಡಿ ಲೈಂಗಿಕವಾಗಿ ಬಳಸಿಕೊಂಡ ಆಟೋ ಚಾಲಕ ಬಳಿಕ ವಂಚನೆ ನಡೆಸಿದ್ದಾಗಿ ದೂರಲಾಗಿದೆ.

ಇನ್ನು ಆತ ನಿರಾಕರಿಸಿದ್ದರಿಂದ ಬಾಲಕಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆಂದೂ ಪೋಷಕರು ತಿಳಿಸಿದ್ದು, ಸಂತ್ರಸ್ತೆ ಅಪ್ರಾಪ್ತಳಾದ ಕಾರಣ ಫೋಕ್ಸೋ ಕಾಯ್ದೆಯಡಿ ಸುಬ್ರಹ್ಮಣ್ಯ ಠಾಣಾ ಪೊಲೀಸರು ಆರೋಪಿ ವಿರುದ್ಧ ಪ್ರಕರಣ ದಾಖಲಿಸಿ ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ.

- Advertisement -
spot_img

Latest News

error: Content is protected !!