Saturday, June 6, 2026
Homeಕರಾವಳಿಉಪ್ಪಿನಂಗಡಿ : ಬೈಕ್ ಹಾಗೂ ಲಾರಿ ನಡುವೆ ಅಪಘಾತ;  ಬೈಕ್ ಸವಾರ ಸಾವು

ಉಪ್ಪಿನಂಗಡಿ : ಬೈಕ್ ಹಾಗೂ ಲಾರಿ ನಡುವೆ ಅಪಘಾತ;  ಬೈಕ್ ಸವಾರ ಸಾವು

- Advertisement -
- Advertisement -

 

 

ಉಪ್ಪಿನಂಗಡಿ : ಬೈಕ್ ಹಾಗೂ ಲಾರಿ ನಡುವೆ ಅಪಘಾತ;  ಬೈಕ್ ಸವಾರ ಸಾವು

ಉಪ್ಪಿನಂಗಡಿ: ಬೈಕ್ ಹಾಗೂ ಲಾರಿ ನಡುವೆ ನಡೆದ ಅಪಘಾತ ಸಂಭವಿಸಿ ಬೈಕ್ ಸವಾರ ಸಾವನ್ನಪ್ಪಿದ ಘಟನೆ ನವೆಂಬರ್ 1 ರಂದು ರಾತ್ರಿ ರಾ.ಹೆ. 75ರ ನೆಲ್ಯಾಡಿ ಸಮೀಪ ನಡೆದಿದೆ. ಕೌಕ್ರಾಡಿ ಗ್ರಾಮದ ಶಾಂತಿಬೆಟ್ಟು ಸಮೀಪದ ನಿವಾಸಿ ಸುರೇಂದ್ರ ಮಹತೋ (35) ಮೃತ ಬೈಕ್ ಸವಾರ.

ಸೆಂಟ್ರಿಂಗ್ ಕೆಲಸ ಮಾಡಿಕೊಂಡಿದ್ದ ಸುರೇಂದ್ರ ಮಹತೋ ಬುಧವಾರರಂದು ರಾತ್ರಿ ಹೊಸಮಜಲು ಕಡೆಯಿಂದ ನೆಲ್ಯಾಡಿಗೆ ಬೈಕ್‌ ನಲ್ಲಿ ಬರುತ್ತಿದ್ದ ವೇಳೆ ಮಂಗಳೂರಿನಿಂದ ಹಾಸನ ಕಡೆಗೆ ಹೋಗುತ್ತಿದ್ದ ಇಕೊಮೆಟ್ ಲಾರಿ ಢಿಕ್ಕಿಯಾಗಿದೆ. ಪರಿಣಾಮ ಘಟನೆಯಿಂದ ಗಂಭೀರ ಗಾಯಗೊಂಡಿದ್ದ ಸುರೇಂದ್ರ ಮೆಹತೋ ಅವರನ್ನು ತಕ್ಷಣ ನೆಲ್ಯಾಡಿ ಖಾಸಗಿ ಆಸ್ಪತ್ರೆಗೆ ಕರೆದೊಯ್ದು, ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರಿಗೆ ಕರೆದೊಯ್ಯುತ್ತಿದ್ದ ವೇಳೆ ದಾರಿ ಮಧ್ಯೆ ಮೃತಪಟ್ಟಿದ್ದಾರೆ ಎನ್ನಲಾಗಿದೆ.

 

- Advertisement -

Latest News

error: Content is protected !!