Saturday, June 6, 2026
Homeಕರಾವಳಿಕಾಸರಗೋಡುಕಾಸರಗೋಡು:  ಅಂಗಡಿಗೆ ಗ್ರಾಹಕನ ಸೋಗಿನಲ್ಲಿ ಬಂದು ಮೇಜಿನ ಮೇಲಿಟ್ಟಿದ್ದ ಮೊಬೈಲ್ ಎಗರಿಸಿದ ಕಳ್ಳ

ಕಾಸರಗೋಡು:  ಅಂಗಡಿಗೆ ಗ್ರಾಹಕನ ಸೋಗಿನಲ್ಲಿ ಬಂದು ಮೇಜಿನ ಮೇಲಿಟ್ಟಿದ್ದ ಮೊಬೈಲ್ ಎಗರಿಸಿದ ಕಳ್ಳ

- Advertisement -
- Advertisement -

ಕಾಸರಗೋಡು: ಗ್ರಾಹಕನ ಸೋಗಿನಲ್ಲಿ ಅಂಗಡಿಯೊಂದಕ್ಕೆ ಬಂದು ಕಳ್ಳನೊಬ್ಬ ಮೇಜಿನ ಮೇಲಿಟ್ಟಿದ್ದ ಮೊಬೈಲ್ ಎಗರಿಸಿದ ಘಟನೆ ಬೇಕಲ ಠಾಣಾ ವ್ಯಾಪ್ತಿಯ ಚಿತ್ತಾರಿ ಚೇಟುಕುಂಡು ಎಂಬಲ್ಲಿನ ಸೂಪರ್ ಮಾರ್ಕೆಟ್ ನಲ್ಲಿ ನಡೆದಿದೆ.ಮೊಬೈಲ್ ಫೋನ್ ಕಳವು ಮಾಡಿ ಪರಾರಿಯಾಗುವ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಅಕ್ಟೋಬರ್ 18ರಂದು ರಾತ್ರಿ 10:45ರ ಸುಮಾರಿಗೆ ಸೂಪರ್ ಮಾರ್ಕೆಟ್ ಗೆ ಸಾಮಗ್ರಿ ಖರೀದಿಸುವ ನೆಪದಲ್ಲಿ ಬಂದಿದ್ದ ವ್ಯಕ್ತಿಯೋರ್ವ ಈ ಕೃತ್ಯ ನಡೆಸಿದ್ದಾನೆ. ಆತ ಕೇಳಿದ ಸಾಮಾಗ್ರಿಯನ್ನು ಮಾಲೀಕ ಹುಡುಕುತ್ತಿದ್ದಂತೆ ಮೇಜಿನ ಮೇಲೆ ಇಟ್ಟಿದ್ದ ಮೊಬೈಲ್ ಫೋನ್ ಅನ್ನು ಎಗರಿಸಿ ಆತ ಪರಾರಿಯಾಗಿದ್ದಾನೆ. ಕಳವಾದ ಮೊಬೈಲ್ ಮೌಲ್ಯ ಸುಮಾರು 30 ಸಾವಿರ ರೂ. ಎಂದು ಹೇಳಲಾಗಿದೆ.ಈ ಬಗ್ಗೆ ಸೂಪರ್ ಮಾರ್ಕೆಟ್ ಮಾಲಕ ಮುಹಮ್ಮದ್ ರಫೀಕ್ ಬೇಕಲ ಠಾಣೆಗೆ ದೂರು ನೀಡಿದ್ದಾರೆ.

- Advertisement -

Latest News

error: Content is protected !!