Friday, June 5, 2026
Homeತಾಜಾ ಸುದ್ದಿಹಿಂದೂಪರ ಕಾರ್ಯಕರ್ತ ಪುನೀತ್ ಕೆರೆಹಳ್ಳಿಗೆ ತಪ್ಪದ  ಸಂಕಷ್ಟ; ಪುನೀತ್ ಕೆರೆಹಳ್ಳಿಯನ್ನು ವಶಕ್ಕೆ ಪಡೆದ ಪೊಲೀಸರು

ಹಿಂದೂಪರ ಕಾರ್ಯಕರ್ತ ಪುನೀತ್ ಕೆರೆಹಳ್ಳಿಗೆ ತಪ್ಪದ  ಸಂಕಷ್ಟ; ಪುನೀತ್ ಕೆರೆಹಳ್ಳಿಯನ್ನು ವಶಕ್ಕೆ ಪಡೆದ ಪೊಲೀಸರು

- Advertisement -
- Advertisement -

ಬೆಂಗಳೂರು: ಹಿಂದೂಪರ ಕಾರ್ಯಕರ್ತ ಪುನೀತ್ ಕೆರೆಹಳ್ಳಿಗೆ ಸದ್ಯಕ್ಕೆ ಅಂತೂ ಸಂಕಷ್ಟ ತಪ್ಪೋ ಹಾಗೇ ಕಾಣಿಸ್ತಿಲ್ಲ. ಇದೀಗ ಮತ್ತೊಂದು ಪ್ರಕರಣದಲ್ಲಿ ಪೊಲೀಸರು ಅವರನ್ನು ವಶಕ್ಕೆ ಪಡೆದಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಜಾತಿನಿಂದನೆ, ಅವಾಚ್ಯ ಶಬ್ದಗಳನ್ನು ಬಳಸಿರುವ ಆರೋಪದ ಅಡಿಯಲ್ಲಿ ಬೆಂಗಳೂರಿನ ಸಂಪಿಗೆಹಳ್ಳಿ ಪೊಲೀಸರು ಪುನೀತ್ ಕೆರೆಹಳ್ಳಿಯನ್ನು ವಶಕ್ಕೆ ಪಡೆದಿದ್ದಾರೆ.

ಭೈರಪ್ಪ ಹರೀಶ್ ಕುಮಾರ್ ಎಂಬುವರನ್ನು  ಪುನೀತ್ ಕೆರೆಹಳ್ಳಿ ಫೇಸ್ ಬುಕ್ ನಲ್ಲಿ ನಿಂದಿಸಿದ್ದರು ಎಂದು ಆರೋಪಿಸಲಾಗಿದ. ಈ ಹಿನ್ನೆಲೆ ಅವರ ವಿರುದ್ಧ ದೂರು ದಾಖಲಿಸಲಾಗಿತ್ತು. ಭೈರಪ್ಪ ಹರೀಶ್ ಕುಮಾರ್ ನೀಡಿದಂತ ದೂರಿನ ಹಿನ್ನಲೆಯಲ್ಲಿ ಪುನೀತ್ ಕೆರೆಹಳ್ಳಿ ವಿರುದ್ಧ ಅಟ್ರಾಸಿಟಿ ಕೇಸ್ ಕೂಡ ದಾಖಲಾಗಿತ್ತು.

ಈ ಕೇಸ್ ದಾಖಲಿಸಿಕೊಂಡಿರುವಂತ ಸಂಪಿಗೆಹಳ್ಳಿ ಪೊಲೀಸರು, ಈಗ ಪುನೀತ್ ಕೆರೆಹಳ್ಳಿಯನ್ನು ವಶಕ್ಕೆ ಪಡೆದಿದ್ದಾರೆ. ಇಂದು ಅವರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸೋ ಸಾಧ್ಯತೆ ಇದೆ.

- Advertisement -

Latest News

error: Content is protected !!