Saturday, June 6, 2026
Homeತಾಜಾ ಸುದ್ದಿ ನಾನು ಯಾವುದೇ ಕಾರಣಕ್ಕೂ ಪಕ್ಷ ಬಿಡುವ ಪ್ರಶ್ನೆಯೇ ಇಲ್ಲ; : ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮಾಜಿ ಮುಖ್ಯಮಂತ್ರಿ...

 ನಾನು ಯಾವುದೇ ಕಾರಣಕ್ಕೂ ಪಕ್ಷ ಬಿಡುವ ಪ್ರಶ್ನೆಯೇ ಇಲ್ಲ; : ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಹೇಳಿಕೆ.

- Advertisement -
- Advertisement -

ಸುಬ್ರಮಣ್ಯ: ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಕೂಡ ಎನ್.ಡಿ.ಎ ಜೊತೆಗಿದೆ. ರಾಜ್ಯದಲ್ಲಿ 28ರಲ್ಲಿ 28 ಸ್ಥಾನಗಳನ್ನು ಎನ್.ಡಿ.ಎ. ಗೆದ್ದುಕೊಳ್ಳಲಿದೆ. ಈ ಮೂಲಕ ವಿಧಾನಸಭಾ ಚುನಾವಣೆಯಲ್ಲಿ ಕಳೆದುಕೊಂಡದನ್ನು ಬಡ್ಡಿ ಸಮೇತ ಪಡೆದುಕೊಳ್ಳಲಿದ್ದೇವೆ ಎಂದು ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಹೇಳಿಕೆ ನೀಡಿದ್ದಾರೆ.

ವಿಧಾನಸಭಾ ಚುನಾವಣೆಯಲ್ಲಿ ಅನೀರಿಕ್ಷಿತ ಹಿನ್ನಡೆಯಾಗಿದೆ.ಆದರೆ ಲೋಕಸಭಾ ಚುನಾವಣೆಯಲ್ಲಿ ಹಿನ್ನಡೆ ಅಸಾಧ್ಯ.ಲೋಕಸಭಾ ಚುನಾವಣೆ ರಾಷ್ಟ್ರೀಯ ವಿಚಾರದಲ್ಲಿ ನಡೆಯುವ ಚುನಾವಣೆ.

ನರೇಂದ್ರ ಮೋದಿ ನೇತೃತ್ವದ ಆಡಳಿತ ಅತ್ಯಂತ ಯಶಸ್ವಿಯಾಗಿದೆ.ಅವರಿಂದ ಈ ದೇಶದಲ್ಲಿ ಅಭಿವೃದ್ಧಿಗೆ ಅರ್ಥ ಬಂದಿದೆ ಎಂದಿದ್ದಾರೆ,

ಇನ್ನು ಇದೇ ವೇಳೆ ಮಾತನಾಡಿದ ಅವರು ಬಿಜೆಪಿ ಪಕ್ಷ ನನಗೆ ಎಲ್ಲವನ್ನು ನೀಡಿದೆ ಎನ್ನುವುದು ಸತ್ಯ.ಎಂಎಲ್ಎ, ಎಂಪಿ, ಎಂಎಲ್ಸಿ, ಮುಖ್ಯಮಂತ್ರಿ, ಕೇಂದ್ರ ಸಚಿವ ಸ್ಥಾನ, ರಾಜ್ಯ, ರಾಷ್ಟ್ರೀಯ ಹುದ್ದೆಗಳನ್ನು ನೀಡಿದೆ.ಇನ್ನು ನಾನು ಏನಾದರೂ ಪಕ್ಷಕ್ಕೆ ನೀಡಬೇಕಿದೆ. ಆದ್ದರಿಂದ ಯಾವುದೇ ಕಾರಣಕ್ಕೂ ಪಕ್ಷ ಬಿಡುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ.

- Advertisement -

Latest News

error: Content is protected !!