Wednesday, June 3, 2026
Homeತಾಜಾ ಸುದ್ದಿಬಿಜೆಪಿ ಟಿಕೆಟ್ಗಾಗಿ 5 ಕೋಟಿ ಡೀಲ್ ಪ್ರಕರಣ; ಅಭಿನವ ಹಾಲಶ್ರೀಗೆ ಹೈಕೋರ್ಟ್ ನಿಂದ ಜಾಮೀನು ಮಂಜೂರು

ಬಿಜೆಪಿ ಟಿಕೆಟ್ಗಾಗಿ 5 ಕೋಟಿ ಡೀಲ್ ಪ್ರಕರಣ; ಅಭಿನವ ಹಾಲಶ್ರೀಗೆ ಹೈಕೋರ್ಟ್ ನಿಂದ ಜಾಮೀನು ಮಂಜೂರು

- Advertisement -
- Advertisement -

ಬೆಂಗಳೂರು: ಬಿಜೆಪಿ ಟಿಕೆಟ್ ಗಾಗಿ 5 ಕೋಟಿ ಡೀಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಅಭಿನವ ಹಾಲಶ್ರೀಗೆ ಹೈಕೋರ್ಟ್ ನಿಂದ ಜಾಮೀನು ಮಂಜೂರಾಗಿದೆ.

ಎಂಎಲ್‌ಎ ಟಿಕೆಟ್ ಕೊಡಿಸುವುದಾಗಿ ವಂಚನೆ ಆರೋಪದಲ್ಲಿ ಚೈತ್ರಾ ಅಂಡ್ ಟೀಂ ಅನ್ನು ಪೊಲೀಸರು ಬಂಧಿಸಿದ್ದರು.ಈ ಪ್ರಕರಣದಲ್ಲಿ ಹಾಲಶ್ರೀ ಕೂಡ ಶಾಮೀಲಾಗಿ ಜೈಲು ಪಾಲಾಗಿದ್ದರು. ಪ್ರಕರಣದಲ್ಲಿ ಜೈಲು ಸೇರಿದ್ದ ಅಭಿನವ ಹಾಲಶ್ರೀ ಜಾಮೀನಿಗಾಗಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.

ಇಂದು ಹೈಕೋರ್ಟ್ ನ ಏಕಸದಸ್ಯ ನ್ಯಾಯಪೀಠದಲ್ಲಿ ಅಭಿನವ ಹಾಲಶ್ರೀ ಅವರ ಜಾಮೀನು ಅರ್ಜಿ ವಿಚಾರಣೆ ನಡೆಯಿತು. ಬಳಿಕ ಅಭಿನವ ಹಾಲಶ್ರೀಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಈ ಮೂಲಕ ಹಾಲಶ್ರೀಗೆ ಪ್ರಕರಣದಲ್ಲಿ ಬಿಗ್ ರಿಲೀಫ್ ಸಿಕ್ಕಿದೆ.

- Advertisement -

Latest News

error: Content is protected !!