Wednesday, June 3, 2026
Homeತಾಜಾ ಸುದ್ದಿರಾಜ್ಯ ಬಿಜೆಪಿ ನೂತನ ಅಧ್ಯಕ್ಷರಾಗಿ ಬಿ ವೈ ವಿಜಯೇಂದ್ರ ಆಯ್ಕೆ

ರಾಜ್ಯ ಬಿಜೆಪಿ ನೂತನ ಅಧ್ಯಕ್ಷರಾಗಿ ಬಿ ವೈ ವಿಜಯೇಂದ್ರ ಆಯ್ಕೆ

- Advertisement -
- Advertisement -

ಬೆಂಗಳೂರು: ರಾಜ್ಯ ಬಿಜೆಪಿ ನೂತನ ಅಧ್ಯಕ್ಷರು ಯಾರಾಗ್ತಾರೆ ಅನ್ನೋ ಚರ್ಚೆಗೆ ಕೊನೆಗೂ ತೆರೆ ಬಿದ್ದಿದೆ. ಬಿಜೆಪಿ ರಾಜ್ಯ ಘಟಕದ ನೂತನ ಅಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ ಅವರನ್ನು ಆಯ್ಕೆ ಮಾಡಲಾಗಿದೆ. ಮುಂಬರುವ ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಹೈಕಮಾಂಡ್‌ ಬಿ ಬೈ ವಿಜಯೇಂದ್ರ ಅವರನ್ನು ಆಯ್ಕೆ ಮಾಡಿದೆ ಎನ್ನಲಾಗಿದೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ, ಅವರು ಈ ಬಗ್ಗೆ ಮಾಹಿತಿ ನೀಡಿದ್ದು, ಶಾಸಕ ವಿಜಯೇಂದ್ರ ಯಡಿಯೂರಪ್ಪ ಅವರನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರಾಗಿ ನೇಮಕ ಮಾಡಲಾಗಿದೆ ಎಂದು ತಿಳಿಸಿದ್ದಾರೆ

 

- Advertisement -

Latest News

error: Content is protected !!