Wednesday, June 3, 2026
Homeಕರಾವಳಿಉಡುಪಿಉಡುಪಿ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ:ಶೀಘ್ರ ಕೊಲೆಯ ಹಿಂದಿನ ಕಾರಣ ಪತ್ತೆ; ಉಡುಪಿ ಎಸ್ಪಿ...

ಉಡುಪಿ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ:ಶೀಘ್ರ ಕೊಲೆಯ ಹಿಂದಿನ ಕಾರಣ ಪತ್ತೆ; ಉಡುಪಿ ಎಸ್ಪಿ ಡಾ. ಅರುಣ್ ಹೇಳಿಕೆ

- Advertisement -
- Advertisement -

ಉಡುಪಿ: ನೇಜಾರಿನಲ್ಲಿ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿ ಶೀಘ್ರ ಕೊಲೆಯ ಹಿಂದಿನ‌ ಕಾರಣವನ್ನು ಪತ್ತೆ ಹಚ್ಚುತ್ತೇವೆ ಎಂದು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಹೇಳಿದ್ದಾರೆ.

ನಾಲ್ವರನ್ನು ಇರಿದು ಹತ್ಯೆ ಮಾಡಲಾಗಿದ್ದು, ಗಾಯಗೊಂಡಿರುವ
ಆಸ್ಪತ್ರೆಗೆ ದಾಖಲಿಸಲಾಗಿದ್ದು ಮನೆಯಲ್ಲಿ ಯಾವುದೇ ವಸ್ತುಗಳು ಕಳವು ಆಗಿರುವ ಬಗ್ಗೆ ಸಾಕ್ಷ್ಯ ಸಿಕ್ಕಿಲ್ಲ ಎಂದು ಎಸ್ಪಿ ಅರುಣ್ ತಿಳಿಸಿದ್ದಾರೆ.

ಹತ್ಯೆ ಪ್ರಕರಣದ ಪ್ರಾಥಮಿಕ ಮಾಹಿತಿ ಸಂಗ್ರಹಿಸಿದ್ದು, ಕೊಲೆಯ ಹಿಂದಿನ ಕಾರಣದ ಬಗ್ಗೆ ಎಲ್ಲಾ ಆಯಾಮಗಳಲ್ಲೂ ತನಿಖೆ ನಡೆಸುತ್ತೇವೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ.

ಉಡುಪಿ ತಾಲೂಕಿನ ನೇಜಾರು ಸಮೀಪದ ತೃಪ್ತಿ ನಗರದಲ್ಲಿ ದುರ್ಷ್ಕರ್ಮಿಯೊಬ್ಬ ಒಂದೇ ಕುಟುಂಬದ ನಾಲ್ವರನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿ ಪರಾರಿಯಾಗಿದ್ದನು.

- Advertisement -

Latest News

error: Content is protected !!