Saturday, June 6, 2026
Homeಕರಾವಳಿಉಡುಪಿಉಡುಪಿ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ; ಮರಣೋತ್ತರ ಪರೀಕ್ಷೆ ಪೂರ್ಣ, ಇಂದು ಅಂತ್ಯಕ್ರಿಯೆ

ಉಡುಪಿ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ; ಮರಣೋತ್ತರ ಪರೀಕ್ಷೆ ಪೂರ್ಣ, ಇಂದು ಅಂತ್ಯಕ್ರಿಯೆ

- Advertisement -
- Advertisement -

ಉಡುಪಿ: ನೇಜಾರು ಸಮೀಪದ ತೃಪ್ತಿ ನಗರದಲ್ಲಿ ನಿನ್ನೆ ಹತ್ಯೆಗೊಳಗಾದ ಒಂದೇ ಕುಟುಂಬದ ನಾಲ್ವರ ಅಂತ್ಯಕ್ರಿಯೆ ಇಂದು ನಡೆಯಲಿದೆ.

ಉಡುಪಿ‌ಯ ಜಾಮಿಯಾ ಮಸೀದಿ ಸಮೀಪದ ದಫನ ಭೂಮಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ.

ನಿನ್ನೆ ರಾತ್ರಿ ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ಮೃತದೇಹಗಳ ಮರಣೋತ್ತರ ಪರೀಕ್ಷೆ ನಡೆದಿದ್ದು, ಇಂದು ಬೆಳಗ್ಗೆ ಆಸ್ಪತ್ರೆಯಿಂದ ಅಂತ್ಯಕ್ರಿಯೆಯ ಹಿನ್ನೆಲೆಯಲ್ಲಿ ತೆಗೆದುಕೊಂಡು ಬರಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಮುಂದುವರಿಸಿದ್ದು, ಸಿಸಿ ಟಿವಿ ದೃಶ್ಯಾವಳಿಗಳ ಪರಿಶೀಲನೆ ಸೇರಿದಂತೆ ನಾನಾ ಅಯಾಮಗಳಲ್ಲಿ ತನಿಖೆ ನಡೆದಿದೆ.

ವ್ಯಕ್ತಿಯೋರ್ವ ಮಾಸ್ಕ್ ಧರಿಸಿ ಬೈಕ್ ನಲ್ಲಿ ತೆರಳಿರುವ ಸಿಸಿ ಟಿವಿ ದೃಶ್ಯಾವಳಿ ಲಭ್ಯವಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

- Advertisement -

Latest News

error: Content is protected !!