Sunday, June 7, 2026
Homeಕರಾವಳಿಮಂಗಳೂರಿನಲ್ಲಿ ಹಾಸ್ಟೆಲ್ ಕಟ್ಟಡದಿಂದ ಹಾರಿ ಎಂಬಿಬಿಎಸ್ ವಿದ್ಯಾರ್ಥಿನಿ ಆತ್ಮಹತ್ಯೆ

ಮಂಗಳೂರಿನಲ್ಲಿ ಹಾಸ್ಟೆಲ್ ಕಟ್ಟಡದಿಂದ ಹಾರಿ ಎಂಬಿಬಿಎಸ್ ವಿದ್ಯಾರ್ಥಿನಿ ಆತ್ಮಹತ್ಯೆ

- Advertisement -
- Advertisement -

ಮಂಗಳೂರು: ಹಾಸ್ಟೆಲ್ ಕಟ್ಟಡದ ಮೇಲಿನಿಂದ ಹಾರಿ ಎಂಬಿಬಿಎಸ್ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.

ಮಂಗಳೂರಿನ ‌ಎ.ಜೆ. ಮೆಡಿಕಲ್ ಕಾಲೇಜಿನ ಎಂಬಿಬಿಎಸ್ ವಿದ್ಯಾರ್ಥಿನಿಯಾಗಿದ್ದ ಪ್ರಕೃತಿ ಶೆಟ್ಟಿ(20) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಇಂದು ಬೆಳಗ್ಗಿನ ಜಾವ 3 ಗಂಟೆಗೆ ಎ.ಜೆ. ಮಹಿಳಾ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಹಾಸ್ಟೆಲ್‌ನ ಆರನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದ್ದು, ಜೀವನದಲ್ಲಿ ಹತಾಶೆಯಿಂದಾಗಿ ಆತ್ಮಹತ್ಯೆ ಎಂದು ವಿದ್ಯಾರ್ಥಿನಿ ಬರೆದಿಟ್ಟಿರುವ ಡೆತ್ ನೋಟ್ ಪತ್ತೆಯಾಗಿದೆ ಎನ್ನಲಾಗಿದೆ.

ಕದ್ರಿ ಪೊಲೀಸ್ ಠಾಣೆಯಲ್ಲಿ ಆತ್ಮಹತ್ಯೆ ‌ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!