Thursday, June 4, 2026
Homeತಾಜಾ ಸುದ್ದಿಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ. ವಿಜಯೇಂದ್ರ ಪದಗ್ರಹಣ ; ಬಿಜೆಪಿ ರಾಜ್ಯ ಕಚೇರಿಯಲ್ಲಿ ಹೋಮ‌ ಸಂಕಲ್ಪದಲ್ಲಿ ಭಾಗಿಯಾದ...

ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ. ವಿಜಯೇಂದ್ರ ಪದಗ್ರಹಣ ; ಬಿಜೆಪಿ ರಾಜ್ಯ ಕಚೇರಿಯಲ್ಲಿ ಹೋಮ‌ ಸಂಕಲ್ಪದಲ್ಲಿ ಭಾಗಿಯಾದ ಶಾಸಕ ಹರೀಶ್ ಪೂಂಜ

- Advertisement -
- Advertisement -

ಬೆಂಗಳೂರು: ರಾಜ್ಯ ಬಿಜೆಪಿಯ 11 ನೇ ರಾಜ್ಯಾಧ್ಯಕ್ಷರಾಗಿ ಶಿಕಾರಿಪುರ ಶಾಸಕ ಬಿ.ವೈ. ವಿಜಯೇಂದ್ರ ಪದಗ್ರಹಣದ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿರುವ ಬಿಜೆಪಿ ರಾಜ್ಯ ಕಚೇರಿಯಲ್ಲಿ ಹೋಮ ಕಾರ್ಯ ನಡೆಸಲಾಯಿತು.

ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಹೋಮ ಕಾರ್ಯದ ಸಂಕಲ್ಪದಲ್ಲಿ ಭಾಗಿಯಾಗಿದ್ದರು.

ದುರ್ಗಾ ಹೋಮ ಮತ್ತು ಗಣಪತಿ ಹೋಮ ನಡೆಸಲಾಗಿದ್ದು, ಶಾಸಕ ಪೂಂಜ ಅವರಿಗೆ ಪೂಜಾ ಕಾರ್ಯಕ್ರಮಗಳ ಉಸ್ತುವಾರಿ ವಹಿಸಲಾಗಿತ್ತು.

ಬಿಜೆಪಿ ರಾಜ್ಯ ಕಾರ್ಯಾಲಯ ಕಾರ್ಯದರ್ಶಿ ಲೋಕೇಶ್ ಅಂಬೆಕಲ್ಲು, ಕಚೇರಿ ಸಿಬ್ಬಂದಿ ಹಾಗೂ ಬಿಜೆಪಿ ಕಾರ್ಯಕರ್ತರು ಹೋಮ ಕಾರ್ಯದಲ್ಲಿ ಭಾಗವಹಿಸಿದ್ದರು.

ವಿಜಯೇಂದ್ರ ಪದಗ್ರಹಣದ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯ ಕಚೇರಿಯನ್ನು ವಿದ್ಯುತ್ ದೀಪಗಳು ಮತ್ತು ತೋರಣಗಳಿಂದ ಅಲಂಕರಿಸಲಾಗಿತ್ತು.

- Advertisement -

Latest News

error: Content is protected !!