Wednesday, June 3, 2026
Homeತಾಜಾ ಸುದ್ದಿಅಧಿಕೃತವಾಗಿ ಕಾಂಗ್ರೆಸ್ ಸೇರಿದ ಮಾಜಿ ಶಾಸಕ ಗೌರಿಶಂಕರ್

ಅಧಿಕೃತವಾಗಿ ಕಾಂಗ್ರೆಸ್ ಸೇರಿದ ಮಾಜಿ ಶಾಸಕ ಗೌರಿಶಂಕರ್

- Advertisement -
- Advertisement -

ಬೆಂಗಳೂರು: ತುಮಕೂರು ಗ್ರಾಮಾಂತರ ಕ್ಷೇತ್ರದ ಮಾಜಿ ಶಾಸಕ ಗೌರಿಶಂಕರ್ ಜೆಡಿಎಸ್ ತೊರೆದು ಇಂದು ಕಾಂಗ್ರೆಸ್ ಪಕ್ಷವನ್ನು ಅಧಿಕೃತವಾಗಿ ಸೇರ್ಪಡೆಗೊಂಡಿದ್ದಾರೆ.

ಈ ಕುರಿತಂತೆ ಕೆಪಿಸಿಸಿಯಿಂದ ಮಾಹಿತಿ ಹಂಚಿಕೊಂಡಿದ್ದು, ಜೆಡಿಎಸ್ ಮುಖಂಡರು, ಮಾಜಿ ಶಾಸಕರಾದ ತುಮಕೂರು ಗ್ರಾಮಾಂತರ ಕ್ಷೇತ್ರದ ಗೌರಿಶಂಕರ್, ಬೆಂಗಳೂರು ದಾಸರಹಳ್ಳಿಯ ಆರ್ ಮಂಜುನಾಥ್ ಅವರು ಅಪಾರ ಬೆಂಬಲಿಗ ನಾಯಕರು, ಬೆಂಬಲಿಗರ ಜತೆ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ ಕೆ ಶಿವಕುಮಾರ್ ಅವರ ಸಮ್ಮುಖದಲ್ಲಿ ಕೆಪಿಸಿಸಿಯ ಭಾರತ್ ಜೋಡೋ ಭವನದಲ್ಲಿ ಬುಧವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಬಿ ಎಲ್ ಶಂಕರ್, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್, ಶಾಸಕರಾದ ನರೇಂದ್ರಸ್ವಾಮಿ, ನೆಲಮಂಗಲ ಶ್ರೀನಿವಾಸಯ್ಯ, ಸಿಎಂ ರಾಜಕೀಯ ಕಾರ್ಯದರ್ಶಿ ಕೆ ಗೋವಿಂದರಾಜು ಮತ್ತಿತರರು ಉಪಸ್ಥಿತರಿದ್ದರು.

- Advertisement -

Latest News

error: Content is protected !!