Friday, June 5, 2026
Homeಕರಾವಳಿಉಡುಪಿಉಡುಪಿ: ನಾಲ್ವರ ಕೊಲೆ ಪ್ರಕರಣದಲ್ಲಿ ಸ್ಥಳ ಮಹಜರು ವೇಳೆ ರಸ್ತೆ ತಡೆ ಮಾಡಿ ಸಾರ್ವಜನಿಕರ ಪ್ರತಿಭಟನೆ:ಮಲ್ಪೆ...

ಉಡುಪಿ: ನಾಲ್ವರ ಕೊಲೆ ಪ್ರಕರಣದಲ್ಲಿ ಸ್ಥಳ ಮಹಜರು ವೇಳೆ ರಸ್ತೆ ತಡೆ ಮಾಡಿ ಸಾರ್ವಜನಿಕರ ಪ್ರತಿಭಟನೆ:ಮಲ್ಪೆ ಠಾಣಾಧಿಕಾರಿ ಮನವೊಲಿಕೆ ಬಳಿಕ ಪ್ರತಿಭಟನೆ ವಾಪಸ್

- Advertisement -
- Advertisement -

ಉಡುಪಿ: ತೃಪ್ತಿ ನಗರದಲ್ಲಿ ಒಂದೇ ಕುಟುಂಬದ ನಾಲ್ಕು ಜನರ ಹತ್ಯೆ ಪ್ರಕರಣದ ಸ್ಥಳ ಮಹಜರು ವೇಳೆ ಸಾರ್ವಜನಿಕರಿಂದ ಪ್ರತಿಭಟನೆ ನಡೆದಿದೆ.

ಕೊಲೆ ಆರೋಪಿ ಅರುಣ್ ಪ್ರವೀಣ್ ಚೌಗುಲೆಯನ್ನು ತಮ್ಮ ಕೈಗೆ ಒಪ್ಪಿಸುವಂತೆ ರಸ್ತೆ ತಡೆ ಮಾಡಿ ಪ್ರತಿಭಟನೆ ನಡೆಸಿದ್ದ ಸಾರ್ವಜನಿಕರು, ಸ್ಥಳಕ್ಕೆ ಎಸ್ಪಿ ಮತ್ತು ಡಿಸಿ ಬರಬೇಕು ಎಂದು ಆಗ್ರಹಿಸಿದ್ದರು.

ನಂತರ ಮಲ್ಪೆ ಠಾಣಾಧಿಕಾರಿ ಗುರುನಾಥ ಹಾದಿಮನಿ ಮನವೊಲಿಸಿದ ಬಳಿಕ ಸಾರ್ವಜನಿಕರು ಪ್ರತಿಭಟನೆ ಕೈಬಿಟ್ಟಿದ್ದಾರೆ.

ಇಂದು ಸಂಜೆ ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಚೌಗುಲೆಯನ್ನು ಕರೆ ತಂದು ಪೊಲೀಸರು ಸ್ಥಳ ಮಹಜರು ನಡೆಸಿದ್ದರು.

- Advertisement -

Latest News

error: Content is protected !!