- Advertisement -
![]()
- Advertisement -
ಪುತ್ತೂರು: ತಾಲೂಕಿನ ಆಡಳಿತ ಸೌಧದ ಬಳಿಯಲ್ಲಿ ಅಮಲು ಪದಾರ್ಥ ಸೇವಿಸಿ, ನಶೆಯಲ್ಲಿದ್ದ ವ್ಯಕ್ತಿಯೋರ್ವ ಪೊಲೀಸರೊಬ್ಬರಿಗೆ ಹಲ್ಲೆ ನಡೆಸಿದ ಘಟನೆ ನಡೆದಿದೆ.
ಬಡಗನ್ನೂರು ಮೂಲದ ಹರೀಶ್ ಹಲ್ಲೆ ನಡೆಸಿದ ವ್ಯಕ್ತಿ. ಈತ ಕುಡಿದ ನಶೆಯಲ್ಲಿ ಸಾರ್ವಜನಿಕರೊಂದಿಗೆ ಅಸಭ್ಯವಾಗಿ ವರ್ತಿಸಿದ್ದು, ಈ ಕುರಿತು ವ್ಯಕ್ತಿಯ ಬಗ್ಗೆ ಠಾಣೆಗೆ ಮಾಹಿತಿ ನೀಡಲಾಗಿತ್ತು. ಇದರಂತೆ 112 ತುರ್ತು ಸೇವೆಯಲ್ಲಿದ್ದ ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದರು. ಆಗ ಸ್ಥಳಕ್ಕೆ ಆಗಮಿಸಿದ ಪೊಲೀಸ್ ಸಿಬ್ಬಂದಿ ನಶೆಯಲ್ಲಿದ್ದ ವ್ಯಕ್ತಿಯನ್ನು ಸಂಭಾಳಿಸುತ್ತಿದ್ದ ಸಂದರ್ಭದಲ್ಲಿ ಆ ವ್ಯಕ್ತಿ ಏಕಾಏಕೀ ಕಲ್ಲಿನಿಂದ ಹಲ್ಲೆ ನಡೆಸಿದ್ದಾನೆ ಎಂದು ತಿಳಿದುಬಂದಿದೆ.
ಇನ್ನು ವ್ಯಕ್ತಿಯಿಂದ ಹಲ್ಲೆಗೊಳಗಾದ ಸಂಚಾರ ಪೊಲೀಸ್ ಠಾಣೆಯ ಸಿಬ್ಬಂದಿ ಪುತ್ತೂರು ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ ಎನ್ನಲಾಗಿದೆ.
- Advertisement -


