Thursday, June 4, 2026
Homeಕರಾವಳಿಸುಳ್ಯ; ತಲಪಾಡಿಯಿಂದ ನಾಪತ್ತೆಯಾದ ಬೆಳ್ಳಾರೆಯ ಬಾಲಕ ಮೈಸೂರಿನಲ್ಲಿ ಪತ್ತೆ

ಸುಳ್ಯ; ತಲಪಾಡಿಯಿಂದ ನಾಪತ್ತೆಯಾದ ಬೆಳ್ಳಾರೆಯ ಬಾಲಕ ಮೈಸೂರಿನಲ್ಲಿ ಪತ್ತೆ

- Advertisement -
- Advertisement -

ಸುಳ್ಯ; ತಲಪಾಡಿಯಿಂದ ನಾಪತ್ತೆಯಾದ  ಬೆಳ್ಳಾರೆಯ ಬಾಲಕ ಮೈಸೂರಿನಲ್ಲಿ ಪತ್ತೆಯಾಗಿದ್ದಾನೆ. ಸುಳ್ಯ ತಾಲೂಕಿನ ಪೆರುವಾಜೆ ಗ್ರಾಮದ ಕುಂಡಡ್ಕ ನಿವಾಸಿ ಹನೀಪ್ ಇಂದ್ರಾಜೆ ಅವರ ಪುತ್ರ, ತಲಪಾಡಿ ಬಿಲಾಲ್ ಮಸೀದಿಯ ವಿದ್ಯಾರ್ಥಿ ಅಬೂಬಕ್ಕರ್ ಅಬೀಲ್ ಎಂಬ ಬಾಲಕ ನ.16ರ ಸಂಜೆಯಿಂದ ನಾಪತ್ತೆಯಾಗಿದ್ದ.

ಈತ ತಲಪಾಡಿಯ ಬಿಲಾಲ್ ಮಸೀದಿಯಲ್ಲಿ ಮದ್ರಸ ಶಿಕ್ಷಣದ ಜತೆಗೆ ಶಾಲಾ ಶಿಕ್ಷಣ ಪಡೆಯುತ್ತಿದ್ದ. ಎಂಟನೇ ತರಗತಿಯ ವಿದ್ಯಾರ್ಥಿ ಆಗಿರುವ ಈತ ಗುರುವಾರ ಸಂಜೆ ಶಾಲೆಯಿಂದ ಮಸೀದಿಗೆ ಬಂದಿದ್ದು ಅಲ್ಲಿ ಅಂಗಡಿಗೆ ಹೋಗಿ ಬರುವುದಾಗಿ ಹೇಳಿ ಹೋದವನು ಮರಳಿ ಬಂದಿರಲಿಲ್ಲ.

ಪೋಷಕರು ಉಳ್ಳಾಲ ಠಾಣೆಯಲ್ಲಿ ದೂರು ನೀಡಿದ್ದು ಹುಡುಕಾಟ ನಡೆಸುತ್ತಿದ್ದರು. ಶನಿವಾರ ಸಂಜೆ ಮೈಸೂರು ಝೂ ಸಮೀಪ ಈತ ಪತ್ತೆಯಾಗಿದ್ದಾನೆ ಎಂದು ಪೊಲೀಸ್ ಮೂಲಗಳು ಮಾಹಿತಿ ನೀಡಿದೆ.

- Advertisement -

Latest News

error: Content is protected !!