Tuesday, June 9, 2026
Homeಕರಾವಳಿಮದ್ಯದ ನಶೆಯಲ್ಲಿ ಅಡ್ಡಾದಿಡ್ಡಿ ವಾಹನ ಚಲಾಯಿಸಿದ ಸರ್ಕಾರಿ ಅಧಿಕಾರಿ!; ಸಾರ್ವಜನಿಕರಿಂದ ಬೈಗುಳದ ಸುರಿಮಳೆ

ಮದ್ಯದ ನಶೆಯಲ್ಲಿ ಅಡ್ಡಾದಿಡ್ಡಿ ವಾಹನ ಚಲಾಯಿಸಿದ ಸರ್ಕಾರಿ ಅಧಿಕಾರಿ!; ಸಾರ್ವಜನಿಕರಿಂದ ಬೈಗುಳದ ಸುರಿಮಳೆ

- Advertisement -
- Advertisement -

ಸುಳ್ಯ: ಅರಂಬೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಮದ್ಯದ ನಶೆಯಲ್ಲಿದ್ದ ಸರ್ಕಾರಿ ಅಧಿಕಾರಿಯೊಬ್ಬರು ಅಡ್ಡಾದಿಡ್ಡಿ ವಾಹನ ಚಲಾಯಿಸಿ ಸಾರ್ವಜನಿಕರಿಂದ ಬೈಗುಳ ತಿಂದ ಘಟನೆ ನಡೆದಿದೆ.

ಸರ್ಕಾರಿ ಅಧಿಕಾರಿಯನ್ನು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಕಾರ್ಯದರ್ಶಿ ನವೀನ್ ಕುಮಾರ್ ಎನ್ನಲಾಗಿದೆ.

ಕಂಠಪೂರ್ತಿ ಕುಡಿದು ಮದ್ಯದ ಮತ್ತಿನಲ್ಲಿದ್ದ ನವೀನ್ ಕುಮಾರ್ ಸುಳ್ಯ ಅರಂಬೂರು ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಾಯಕಾರಿಯಾಗಿ, ರಸ್ತೆಯಲ್ಲಿ ಅಡ್ಡಾದಿಡ್ಡಿ ವಾಹನ ಚಲಾಯಿಸಿದ್ದಾರೆ. ಈ ವೇಳೆಯಲ್ಲಿ ಸಾರ್ವಜನಿಕರ ಸಮಯ ಪ್ರಜ್ಞೆಯಿಂದ ಹಲವಾರು ವಾಹನಗಳಿಗೆ ಢಿಕ್ಕಿ ಆಗುವಂತಹ ಸಂಭಾವ್ಯ ದುರಂತವೊಂದು ತಪ್ಪಿದಂತಾಗಿದೆ. ರಸ್ತೆಯುದ್ದಕ್ಕೂ ವಿರುದ್ಧ ದಿಕ್ಕಿನಲ್ಲಿ ಅಡ್ಡಾದಿಡ್ಡಿ ವಾಹನ ಚಲಾಯಿಸಿ ಅಪಘಾತ ಸಂಭವಿಸುವ ಸಾಧ್ಯತೆಯನ್ನು ಮನಗಂಡ ಕೆಲವು ವಾಹನ ಸವಾರರು ಸಾರ್ವಜನಿಕರ ಸಹಕಾರದಿಂದ ಅಡ್ಡಗಟ್ಟಿದ್ದಾರೆ. ಸರ್ಕಾರಿ ಅಧಿಕಾರಿಯ ಈ ವರ್ತನೆ ಸಾರ್ವಜನಿಕ ವಲಯದಲ್ಲಿ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ ಎನ್ನಲಾಗಿದೆ.

- Advertisement -

Latest News

error: Content is protected !!