Thursday, June 4, 2026
Homeಕರಾವಳಿಉಳ್ಳಾಲದಲ್ಲಿ ನಿಷೇಧಿತ ಮಾದಕ ವಸ್ತು ಮಾರುತ್ತಿದ್ದ ಇಬ್ಬರು ಅರೆಸ್ಟ್

ಉಳ್ಳಾಲದಲ್ಲಿ ನಿಷೇಧಿತ ಮಾದಕ ವಸ್ತು ಮಾರುತ್ತಿದ್ದ ಇಬ್ಬರು ಅರೆಸ್ಟ್

- Advertisement -
- Advertisement -

ಮಂಗಳೂರು: ನಿಷೇಧಿತ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಇಬ್ಬರನ್ನು ಮಂಗಳೂರಿನಲ್ಲಿ ಪೊಲೀಸರು ಬಂಧಿಸಿದ್ದಾರೆ.

ಮಂಗಳೂರು ನಗರ ಪೊಲೀಸರು ಕಾರ್ಯಾಚರಣೆ ನಡೆಸಿ 132 ಗ್ರಾಂ ಮೆಥಂಪೊಟಮೈನ್ ಮತ್ತು 250 ಎಲ್‌ಎಸ್ ಡಿ ಸ್ಟಾಂಪ್ ಡ್ರಗ್ ವಶಪಡಿಸಿಕೊಂಡಿದ್ದಾರೆ.

ಕಾರಿನಲ್ಲಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ವೇಳೆ ಇಬ್ಬರು ಆರೋಪಿಗಳನ್ನು ಬಂಧನ ಮಾಡಲಾಗಿದ್ದು, ಶಿಶಿರ್ ದೇವಾಡಿಗ ಮತ್ತು ಎಲ್‌ ಶುಷಾನ್ ಬಂಧಿತ ಆರೋಪಿಗಳಾಗಿದ್ದಾರೆ.

ಉಳ್ಳಾಲ ತಾಲೂಕಿನ ಪೆರ್ಮನ್ನೂರು ಗ್ರಾಮದಲ್ಲಿ ಆರೋಪಿಗಳನ್ನು ಬಂಧನ ಮಾಡಲಾಗಿದ್ದು, ಕಾರಿನಲ್ಲಿ ತಲ್ವಾರ್ ಮತ್ತು ಡ್ರ್ಯಾಗರ್ ಗಳನ್ನು ಇಟ್ಟುಕೊಂಡು ಮಾರಾಟ ಮಾಡುತ್ತಿದ್ದರು ಎಂದು ಹೇಳಲಾಗಿದೆ.

ಕಾರು ಮತ್ತು ನಗದು ಸೇರಿದಂತೆ ಹದಿನಾಲ್ಕು ಲಕ್ಷ ರೂಪಾಯಿ ಮೌಲ್ಯದ ವಸ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

- Advertisement -

Latest News

error: Content is protected !!