Thursday, June 4, 2026
Homeಕರಾವಳಿಉಡುಪಿಉಡುಪಿ:ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ; ನರಹಂತಕ ಪ್ರವೀಣನ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ಉಡುಪಿ:ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ; ನರಹಂತಕ ಪ್ರವೀಣನ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

- Advertisement -
- Advertisement -

ಉಡುಪಿಯಲ್ಲಿ ನಡೆದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣದ ಆರೋಪಿ ನರಹಂತಕ ಪ್ರವೀಣನ ನ್ಯಾಯಾಂಗ ಬಂಧನ ಅವಧಿ ವಿಸ್ತರಣಯಾಗಿದೆ.ಆರೋಪಿ ಪ್ರವೀಣ್ ಚೌಗುಲೆಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಸ್ತರಿಸಿ ಉಡುಪಿ ನ್ಯಾಯಾಲಯ ಆದೇಶ ಹೊರಡಿಸಿದೆ.

ಆರೋಪಿ ಪ್ರವೀಣ್ ಚೌಗಲೆಯನ್ನು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿದ್ದು, ಆರೋಪಿಗೆ ಡಿಸೆಂಬರ್ 18ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶ ಹೊರಡಿಸಿದೆ.

ಸದ್ಯ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಪ್ರವೀಣ್ ಚೌಗುಲೆ ನವೆಂಬರ್ 12ರಂದು ನೇಜಾರಿನ ಒಂದೇ ಕುಟುಂಬದ ನಾಲ್ವರನ್ನು ಬರ್ಬರವಾಗಿ ಹತ್ಯೆಗೈದಿದ್ದ. ಈ ಭೀಕರ ಘಟನೆ ರಾಜ್ಯದಲ್ಲಿ ಭಾರೀ ಸಂಚಲನವನ್ನೇ ಮೂಡಿಸಿತ್ತು. ಸದ್ಯ ಆರೋಪಿ ಪ್ರವೀಣ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾನೆ.

- Advertisement -

Latest News

error: Content is protected !!