Thursday, June 4, 2026
Homeತಾಜಾ ಸುದ್ದಿಹೆಸರಾಂತ ಹಿರಿಯ ನಟಿ ಹೇಮಾ ಚೌಧರಿ ಆರೋಗ್ಯ ಸ್ಥಿತಿ ಗಂಭೀರ

ಹೆಸರಾಂತ ಹಿರಿಯ ನಟಿ ಹೇಮಾ ಚೌಧರಿ ಆರೋಗ್ಯ ಸ್ಥಿತಿ ಗಂಭೀರ

- Advertisement -
- Advertisement -

ಬೆಂಗಳೂರು: ಕನ್ನಡದ ಹೆಸರಾಂತ ಹಿರಿಯ ನಟಿ ಹೇಮಾ ಚೌಧರಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. 

ಅವರಿಗೆ ಎರಡು ದಿನಗಳ ಹಿಂದೆ  ಬ್ರೆನ್ ಹ್ಯಾಮರೇಜ್ ಆಗಿತ್ತು ಎಂದು ತಿಳಿದು ಬಂದಿದೆ. ಸದ್ಯ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಕನ್ನಡ, ಮಲಯಾಳಂ, ತೆಲುಗು, ತಮಿಳು ಹೀಗೆ ನಾನಾ ಭಾಷೆಗಳಲ್ಲಿ ಹೇಮಾ ಚೌಧರಿ ನಟಿಸಿದ್ದಾರೆ. ಕಿರುತೆರೆಯಲ್ಲೂ ತಮ್ಮದೇ ಆದ ಛಾಪು ಮೂಡಿಸಿದ್ದಾರೆ. ಹೀಗಾಗಿ ಹೇಮಾ ಅವರ ಅನಾರೋಗ್ಯ ಅವರ ಅಭಿಮಾನಿಗಳಲ್ಲಿ ಆತಂಕ ಮೂಡಿಸಿದೆ. ಹೇಮಾ ಅವರ ಪುತ್ರ ಐರ್ಲೆಂಡ್ ನಲ್ಲಿದ್ದು, ಅವರು ಅಲ್ಲಿಂದ ಹೊರಟಿದ್ದಾರೆ ಎಂದು ತಿಳಿದು ಬಂದಿದೆ.  

- Advertisement -

Latest News

error: Content is protected !!