Wednesday, June 3, 2026
Homeಕರಾವಳಿಮಂಗಳೂರು: ಕೋವಿಡ್ ಪಾಸಿಟಿವ್ ಆಗಿದ್ದ ಉತ್ತರ ಭಾರತ ಮೂಲದ ಕಾರ್ಮಿಕ ವೆನ್ಲಾಕ್ ನಲ್ಲಿ ಸಾವು

ಮಂಗಳೂರು: ಕೋವಿಡ್ ಪಾಸಿಟಿವ್ ಆಗಿದ್ದ ಉತ್ತರ ಭಾರತ ಮೂಲದ ಕಾರ್ಮಿಕ ವೆನ್ಲಾಕ್ ನಲ್ಲಿ ಸಾವು

- Advertisement -
- Advertisement -

ಮಂಗಳೂರು: ಕೋವಿಡ್ ಪಾಸಿಟಿವ್ ಆಗಿದ್ದ ಉತ್ತರ ಭಾರತ ಮೂಲದ 40 ವರ್ಷದ ವ್ಯಕ್ತಿಯೋರ್ವರು ವೆನ್ಲಾಕ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಮೃತ ವ್ಯಕ್ತಿ ಉಸಿರಾಟದ ತೊಂದರೆಯಿಂದಾಗಿ ವೆನ್ ಲಾಕ್ ಆಸ್ಪತ್ರೆಗೆ ದಾಖಲಾಗಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಎರಡು ದಿನಗಳ ಹಿಂದಷ್ಟೇ ಕೋವಿಡ್ ಪಾಸಿಟಿವ್ ಇರುವುದು ಪತ್ತೆಯಾಗಿತ್ತು.

ಅಲ್ಲದೇ ವಲಸೆ ಕಾರ್ಮಿಕನಾಗಿ ಮಂಗಳೂರಿಗೆ ಬಂದಿದ್ದ ವ್ಯಕ್ತಿ, ಡಯಾಬಿಟಿಸ್ ನಿಂದ ಬಳಲುತ್ತಿದ್ದು, ಮದ್ಯ ಸೇವನೆಯ ಅಭ್ಯಾಸ ಇತ್ತು ಎನ್ನಲಾಗಿದೆ.

ಆದರೆ ಕೋವಿಡ್ ನಿಂದಲೇ ವ್ಯಕ್ತಿಯ ಸಾವು ಸಂಭವಿಸಿದ್ಯಾ ಎಂಬುದು ದೃಢಪಡಬೇಕಾಗಿದೆ ಎಂದು ಆರೋಗ್ಯ ಸಚಿವ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

- Advertisement -

Latest News

error: Content is protected !!