Tuesday, July 1, 2025
Homeತಾಜಾ ಸುದ್ದಿಜಮ್ಮು ಕಾಶ್ಮೀರದಲ್ಲಿ ಸೇನೆಯಿಂದ ನಾಗರಿಕರ ಹತ್ಯೆ ವದಂತಿ; ಮುನ್ನೆಚ್ಚರಿಕೆಗಾಗಿ ಇಂಟರ್‌ನೆಟ್ ಸ್ಥಗಿತ

ಜಮ್ಮು ಕಾಶ್ಮೀರದಲ್ಲಿ ಸೇನೆಯಿಂದ ನಾಗರಿಕರ ಹತ್ಯೆ ವದಂತಿ; ಮುನ್ನೆಚ್ಚರಿಕೆಗಾಗಿ ಇಂಟರ್‌ನೆಟ್ ಸ್ಥಗಿತ

spot_img
- Advertisement -
- Advertisement -

ಜಮ್ಮು ಕಾಶ್ಮೀರದಲ್ಲಿ ಮೂವರು ನಾಗರಿಕರಿಗೆ ಸೇನಾ ಸಿಬ್ಬಂದಿ ವಿಚಾರಣೆಗೆಂದು ಕರೆದುಕೊಂಡು ಹೋಗಿ ಚಿತ್ರಹಿಂಸೆ ನೀಡಿ ಸಾಯಿಸಿದ್ದಾರೆ ಎಂಬ ವದಂತಿ ಹಬ್ಬಿದ ಹಿನ್ನೆಲೆ ಜಮ್ಮು ಕಾಶ್ಮೀರದಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಇದರ ಪರಿಣಾಮ ಮುನ್ನೆಚ್ಚರಿಕೆಯ ಕ್ರಮವಾಗಿ ಶನಿವಾರದಂದು(ಡಿ.23) ಬೆಳಿಗ್ಗೆಯಿಂದ ಪೂಂಚ್ ಮತ್ತು ರಾಜ್‌ರಿ ಜಿಲ್ಲೆಗಳಲ್ಲಿ ಇಂಟರ್‌ನೆಟ್‌ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ.

ಇನ್ನು ಜಮ್ಮು ಕಾಶ್ಮೀರದಲ್ಲಿ ಭಯೋತ್ಪಾದಕ ದಾಳಿಯ ಬಳಿಕ ಮೂವರು ನಾಗರಿಕರು ಶವವಾಗಿ ಪತ್ತೆಯಾಗಿದ್ದರು.ಇದರ ನಿಮಿತ್ತ ಸೇನಾ ಸಿಬ್ಬಂದಿಗಳು ಮೂವರು ನಾಗರಿಕರನ್ನು ವಿಚಾರಣೆಗಾಗಿ ಕರೆದುಕೊಂಡು ಹೋಗಿದ್ದು, ಮೂವರು ವ್ಯಕ್ತಿಗಳು ಶವವಾಗಿ ಪತ್ತೆಯಾಗಿದ್ದಾರೆ. ಇವರನ್ನು ಸೇನಾ ಸಿಬ್ಬಂದಿ ಚಿತ್ರಹಿಂಸೆ ನೀಡಿ ಸಾಯಿಸಿದ್ದಾರೆ ಎಂದು ಆರೋಪಿಸಲಾದ ವಿಡಿಯೋವೊಂದು ಇಂಟರ್‌ನೆಟ್‌ನಲ್ಲಿ ಹರಿದಾಡುತ್ತಿದೆ. ಈ ವಿಚಾರದಿಂದ ಜನರು ಉದ್ರಿಕ್ತಗೊಂಡಿದ್ದು, ಪರಿಸ್ಥಿತಿಯನ್ನು ಹತೋಟಿಯಲ್ಲಿಡುವ ಸಲುವಾಗಿ ಇಂಟರ್‌ನೆಟ್ ಅನ್ನು ಸ್ಥಗಿತಗೊಳಿಸಲಾಗಿದೆ ಎಂದು ತಿಳಿದು ಬಂದಿದೆ.

ಸೇನೆ ಮತ್ತು ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳು ಭದ್ರತೆಯ ಉಸ್ತುವಾರಿ ವಹಿಸಿದ್ದು, ಸೇನೆ ಮತ್ತು ಪೊಲೀಸರು ಪೂಂಚ್ ಮತ್ತು ರಾಜೇರಿ ಜಿಲ್ಲೆಗಳಲ್ಲಿ ಬಿಗಿ ಭದ್ರತೆ ಕೈಗೊಂಡಿದ್ದಾರೆ.

ಮೃತಪಟ್ಟವರು ಬುಫಿಯಾಝ್ನ ಟೋಪಾ ಪೀರ್ ಗ್ರಾಮದ ಸಫೀರ್ ಹುಸೇನ್ (43), ಮೊಹಮ್ಮದ್ ಶೋಕೆಟ್ (27) ಮತ್ತು ಶಬೀರ್ ಅಹ್ಮದ್ (32) ಎಂದು ಗುರುತಿಸಲಾಗಿದೆ. ಮೂವರ ಸಾವಿಗೂ ನಿಖರವಾದ ಕಾರಣ ತಿಳಿದು ಬಂದಿಲ್ಲ. ಕುಟುಂಬಸ್ಥರು ಸೇನೆಯವರೇ ಹತ್ಯೆ ಮಾಡಿರುವುದಾಗಿ ಆರೋಪಿಸಿದ್ದಾರೆ.

- Advertisement -
spot_img

Latest News

error: Content is protected !!