Sunday, June 7, 2026
Homeಕರಾವಳಿಪುತ್ತೂರು ತಾಲೂಕು ಆಸ್ಪತ್ರೆಯಲ್ಲಿ ಬೆಂಕಿ ಅವಘಡ

ಪುತ್ತೂರು ತಾಲೂಕು ಆಸ್ಪತ್ರೆಯಲ್ಲಿ ಬೆಂಕಿ ಅವಘಡ

- Advertisement -
- Advertisement -

ಪುತ್ತೂರು: ಪುತ್ತೂರು ತಾಲೂಕು ಸಾರ್ವಜನಿಕ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಬೆಂಕಿ ಕಾಣಿಸಿಕೊಂಡು ಆತಂಕ ಸೃಷ್ಟಿಯಾಗಿತ್ತು.

ಬೆಂಕಿ ತಗುಲಿದ ಕೆಲವೇ ಹೊತ್ತಿನಲ್ಲಿ ಅಗ್ನಿಶಾಮಕ ದಳ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದು, ಎಸಿ ಘಟಕದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದ ಕಾರಣ ಬೆಂಕಿ ಹೊತ್ತಿಕೊಂಡಿದೆ ಎಂದು ಹೇಳಲಾಗಿದೆ.

ಬೆಂಕಿ ಅನಾಹುತ ಸಂಭವಿಸಿದ ಕೂಡಲೇ ತೀವ್ರ ನಿಗಾ ಘಟಕದಲ್ಲಿದ್ದ ಇಬ್ಬರು ರೋಗಿಗಳನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ ಮಾಡಲಾಗಿದೆ.

ಹವಾನಿಯಂತ್ರಿತ ಘಟಕದ ಚಿಪ್ಪು ಒಡೆದ ಪರಿಣಾಮ ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಎಸಿ ಯಂತ್ರ ಸಹಿತ ಕೆಲವು ಉಪಕರಣಗಳು ಹಾನಿಗೊಳಗಾಗಿವೆ.

ಸ್ಥಳಕ್ಕೆ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

- Advertisement -

Latest News

error: Content is protected !!