Saturday, June 6, 2026
Homeಕರಾವಳಿಮೂಡಬಿದಿರೆ: ಆಳ್ವಾಸ್ ಶಿಕ್ಷಣ ಸಂಸ್ಥೆಯ ಹಾಸ್ಟೆಲ್ ನಲ್ಲಿ ಪಿಯುಸಿ ವಿದ್ಯಾರ್ಥಿ ಆತ್ಮಹತ್ಯೆ

ಮೂಡಬಿದಿರೆ: ಆಳ್ವಾಸ್ ಶಿಕ್ಷಣ ಸಂಸ್ಥೆಯ ಹಾಸ್ಟೆಲ್ ನಲ್ಲಿ ಪಿಯುಸಿ ವಿದ್ಯಾರ್ಥಿ ಆತ್ಮಹತ್ಯೆ

- Advertisement -
- Advertisement -

ಮೂಡಬಿದಿರೆ: ದ್ವಿತೀಯ ಪಿಯುಸಿ ವಿದ್ಯಾರ್ಥಿಯೋರ್ವ ಹಾಸ್ಟೆಲ್ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದಿರೆಯಲ್ಲಿ ನಡೆದಿದೆ.

ಆಳ್ವಾಸ್ ಶಿಕ್ಷಣ ಸಂಸ್ಥೆಯ ಹಾಸ್ಟೆಲ್ ನ ಸ್ನಾನಗೃಹದಲ್ಲಿ ದ್ವಿತಿಯ ಪಿಯುಸಿ ವಿದ್ಯಾರ್ಥಿ ಮನೋಜ್ (18) ಆತ್ಮಹತ್ಯೆ ಮಾಡಿಕೊಂಡಿದ್ದಾ‌ನೆ.ಮೃತ ಮನೋಜ್ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ತರ್ಚಿಹಾಳ ಗ್ರಾಮದವನಾಗಿದ್ದು, ಪೋಷಕರಿಗೆ ಮಾಹಿತಿ ನೀಡಲಾಗಿದೆ.

ಮನೋಜ್ ಆತ್ಮಹತ್ಯೆ ಮಾಡಿಕೊಂಡಿರುವ ವಿಷಯ ತಿಳಿದು ಪೋಷಕರು ಮೂಡಬಿದಿರೆಗೆ ದೌಡಾಯಿಸಿದ್ದು,
ತಾವು ಬರುವವರೆಗೂ ಶವ ಹೊರ ತೆಗೆಯದಂತೆ ಒತ್ತಾಯಿಸಿದ್ದಾರೆ.ಮೂಡಬಿದಿರೆ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಆತ್ಮಹತ್ಯೆ ಪ್ರಕರಣ ನಡೆದಿದೆ.

- Advertisement -

Latest News

error: Content is protected !!