Friday, August 28, 2026
Homeಕರಾವಳಿಮಂಗಳೂರು: ಅನ್ಯ ಕೋಮಿನ ವಿದ್ಯಾರ್ಥಿ-ವಿದ್ಯಾರ್ಥಿನಿ ತಡೆದು ಪ್ರಶ್ನಿಸಿದ ಹಿಂದೂ ಸಂಘಟನೆ ಕಾರ್ಯಕರ್ತರು

ಮಂಗಳೂರು: ಅನ್ಯ ಕೋಮಿನ ವಿದ್ಯಾರ್ಥಿ-ವಿದ್ಯಾರ್ಥಿನಿ ತಡೆದು ಪ್ರಶ್ನಿಸಿದ ಹಿಂದೂ ಸಂಘಟನೆ ಕಾರ್ಯಕರ್ತರು

- Advertisement -
- Advertisement -

ಮಂಗಳೂರು: ಸೋಮೇಶ್ವರ ದೇವಸ್ಥಾನದ ಬಳಿ ಕೇರಳ ಮೂಲದ ಅನ್ಯ ಕೋಮಿನ ವಿದ್ಯಾರ್ಥಿಗಳನ್ನು ತಡೆದು ಹಿಂದೂ ಕಾರ್ಯಕರ್ತರು ಪ್ರಶ್ನೆ ಮಾಡಿರುವ ಘಟನೆ ನಡೆದಿದೆ.

ಸೋಮೇಶ್ವರ ದೇವಸ್ಥಾನಕ್ಕೆ ತೆರಳಿ ಸುತ್ತಮುತ್ತ ಓಡಾಡುತ್ತಿದ್ದ ಇಬ್ಬರು ಹಿಂದೂ ವಿದ್ಯಾರ್ಥಿನಿಯರು, ಓರ್ವ ಹಿಂದೂ ವಿದ್ಯಾರ್ಥಿ ಮತ್ತು ಓರ್ವ ಮುಸ್ಲಿಂ ವಿದ್ಯಾರ್ಥಿಯನ್ನು ಹಿಂದೂ ಕಾರ್ಯಕರ್ತರು ತಡೆದು ಪ್ರಶ್ನೆ ಮಾಡಿದ್ದಾರೆ.

ನಾಲ್ಕು ಜನ ವಿದ್ಯಾರ್ಥಿಗಳು ಮತ್ತು ವಿದ್ಯಾರ್ಥಿನಿಯರು ಉಳ್ಳಾಲದ ಖಾಸಗಿ ಕಾಲೇಜಿನಲ್ಲಿ ಓದುತ್ತಿದ್ದು, ದೇವಸ್ಥಾನಕ್ಕೆ ಬಂದು ಸ್ಥಳೀಯವಾಗಿ ಸುತ್ತಾಡುತ್ತಿದ್ದ ವೇಳೆ ಮುಸ್ಲಿಂ ವಿದ್ಯಾರ್ಥಿಯ ಜೊತೆ ಇದ್ದ ಹಿಂದೂ ಯುವತಿಯನ್ನು ತಡೆದು ಪ್ರಶ್ನೆ ಮಾಡಲಾಗಿದೆ.

ಬೇರೆ ಬೇರೆ ಕೋಮಿನ ವಿದ್ಯಾರ್ಥಿಗಳು ಎಂದು ತಿಳಿದ ಬಳಿಕ ಹಿಂದೂ ಸಂಘಟನೆಯ ಕಾರ್ಯಕರ್ತರು ಪೊಲೀಸ್ ಕಂಟ್ರೋಲ್‌ ರೂಂಗೆ ಕರೆ ಮಾಡಿ ಪೊಲೀಸರನ್ನು ಕರೆಸಿದ್ದಾರೆ.

ಸ್ಥಳಕ್ಕೆ ಬಂದ ಉಳ್ಳಾಲ ಠಾಣೆ ಪೊಲೀಸರು ಯುವಕ ಮತ್ತು ಯುವತಿಯನ್ನು ಠಾಣೆಗೆ ಕರೆದುಕೊಂಡು ಹೋಗಿ
ವಿಚಾರಣೆ ನಡೆಸಿ ಮಾಹಿತಿ ಪಡೆದು ಕಳುಹಿಸಿದ್ದಾರೆ

- Advertisement -

Latest News

error: Content is protected !!