Sunday, June 7, 2026
Homeಕರಾವಳಿಡಾ.‌ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಶ್ರೀರಂಗಪಟ್ಟಣ ನಗರ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲು

ಡಾ.‌ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಶ್ರೀರಂಗಪಟ್ಟಣ ನಗರ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲು

- Advertisement -
- Advertisement -

ಮಂಡ್ಯ: ಆರ್ ಎಸ್ ಎಸ್ ಮುಖಂಡ ಡಾ. ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಶ್ರೀರಂಗಪಟ್ಟಣ ನಗರ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ.

ನಜ್ಮಾ ನಝೀರ್ ಎಂಬವರು ನೀಡಿದ ದೂರಿನ‌ ಅನ್ವಯ ಶ್ರೀರಂಗಪಟ್ಟಣ ನಗರ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 354, 294, 509, 506, 153ಎ, 295, 295ಎ ಮತ್ತು 298 ರ ಅಡಿ ಪ್ರಕರಣ ದಾಖಲಾಗಿದೆ. ಶ್ರೀರಂಗಪಟ್ಟಣದಲ್ಲಿ ನಡೆದಿದ್ದ ಹನುಮ ಸಂಕೀರ್ತನಾ ಯಾತ್ರೆಯಲ್ಲಿ ಮುಸ್ಲಿಮರ ವಿರುದ್ಧ ಅಕ್ಷೇಪಾರ್ಹ ಹೇಳಿಕೆ ನೀಡಿರುವ ಆರೋಪದಡಿ ದೂರು ದಾಖಲಿಸಲಾಗಿದೆ.

ಕಲ್ಲಡ್ಕ ಪ್ರಭಾಕರ್ ಭಟ್ ಹಾಗೂ ಇತರರ ವಿರುದ್ಧ ಪ್ರಕರಣ ದಾಖಲಿಸಿ ರೌಡಿಶೀಟರ್ ತೆರೆದು ಕಾನೂನು ಕ್ರಮ ತೆಗೆದುಕೊಳ್ಳುವಂತೆ ದೂರು ನೀಡಲಾಗಿದೆ. ಡಿಸೆಂಬರ್ 24 ರಂದು ನಡೆದ ಸಂಕೀರ್ತನಾ ಯಾತ್ರೆಯಲ್ಲಿ ಹನುಮ ಮಾಲಾಧಾರಿಗಳನ್ನು ಉದ್ದೇಶಿಸಿ ಶ್ರೀರಂಗಪಟ್ಟಣದಲ್ಲಿ ಕಲ್ಲಡ್ಕ ಪ್ರಭಾಕರ್ ಭಟ್ ಭಾಷಣ ಮಾಡಿದ್ದರು.

- Advertisement -

Latest News

error: Content is protected !!