Thursday, June 4, 2026
Homeಕರಾವಳಿಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಎಫ್ ಐ ಆರ್ ದಾಖಲಾಗಿದ್ದಕ್ಕೆ ವಿಹೆಚ್ ಪಿ ಖಂಡನೆ

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಎಫ್ ಐ ಆರ್ ದಾಖಲಾಗಿದ್ದಕ್ಕೆ ವಿಹೆಚ್ ಪಿ ಖಂಡನೆ

- Advertisement -
- Advertisement -

ಮಂಗಳೂರು: ಮಂಡ್ಯದ ಶ್ರೀರಂಗಪಟ್ಟಣದಲ್ಲಿ ಹನುಮಜಯಂತಿ ಪ್ರಯುಕ್ತ ನಡೆದ ಕಾರ್ಯಕ್ರಮದಲ್ಲಿ ಭಾಷಣ ಮಾಡಿದ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಮುಖರಾದ ಡಾ| ಕಲ್ಲಡ್ಕ ಪ್ರಭಾಕರ ಭಟ್‌ ವಿರುದ್ಧ ಎಫ್  ಐ ಆರ್ ದಾಖಲಾಗಿರೋದನ್ನು ವಿಹೆಚ್ ಪಿ ಖಂಡಿಸಿದೆ.

ತ್ರಿವಳಿ ತಲಾಖ್‌ ನಿಷೇಧದ ಮೂಲಕ ಕೇಂದ್ರ ಸರಕಾರ ಮುಸ್ಲಿಂ ಮಹಿಳೆಯರಿಗೆ ಸಮಾಜದಲ್ಲಿ ಸಮಾನತೆಯ ಹಕ್ಕು ನೀಡಿರುವುದನ್ನು ಪ್ರಭಾಕರ ಭಟ್‌ ಅವರು ಭಾಷಣದಲ್ಲಿ ಉಲ್ಲೇಖೀಸಿದ್ದಾರೆ.

ಇದಕ್ಕಾಗಿ ಪ್ರಕರಣ ದಾಖಲಿಸಿರುವುದು ಖಂಡನೀಯ. ಇದು ಸಂಘ ಮತ್ತು ಹಿಂದೂ ಸಂಘಟನೆಗಳನ್ನು ದಮನಿಸುವ ಸಂಚು.ಸಿದ್ದರಾಮಯ್ಯ ಸರಕರಾದ ಹಿಂದೂ ವಿರೋಧಿ ನೀತಿಯ ಮುಂದುವರಿದ ಭಾಗವಾಗಿ ಸುಳ್ಳು ಕೇಸು ದಾಖಲಿಸಲಾಗಿದೆ. ಕೂಡಲೇ ಕೇಸು ವಾಪಸ್‌ ಪಡೆಯಬೇಕು ಎಂದು ವಿಶ್ವಹಿಂದೂ ಪರಿಷತ್‌ ಪ್ರಾಂತ ಸಹ ಕಾರ್ಯದರ್ಶಿ ಶರಣ್‌ ಪಂಪ್‌ವೆಲ್‌ ಒತ್ತಾಯಿಸಿದ್ದಾರೆ.

- Advertisement -

Latest News

error: Content is protected !!