ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಮುರಗಮಲ್ಲ ಸರ್ಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿಗಳೊಂದಿಗೆ ಶಿಕ್ಷಕರು ಶೈಕ್ಷಣಿಕ ಪ್ರವಾಸಕ್ಕೆ ತೆರಳಿದ್ದು, ಈ ಸಂದರ್ಭದಲ್ಲಿ ಶಾಲೆಯ ಮುಖ್ಯ ಶಿಕ್ಷಕಿಯೊಬ್ಬರು ತನ್ನ ಮಗ ವಯಸ್ಸಿನ ಅಪ್ರಾಪ್ತ ಬಾಲಕನೊಂದಿಗೆ ವರ್ತಿಸಿರುವುದಲ್ಲದೇ ಅಸಭ್ಯವಾಗಿ ಆತನೊಂದಿಗೆ ರೊಮ್ಯಾಟಿಕ್ ಆಗಿ ವರ್ತಿಸಿ ವಿಡಿಯೋ ಹಾಗೂ ಚಿತ್ರಗಳನ್ನು ತನ್ನ ಮೊಬೈಲ್ನಲ್ಲಿ ಸೆರೆ ಹಿಡಿದಿರುವ ಘಟನೆ ನಡೆದಿದೆ.
ಮುಖ್ಯ ಶಿಕ್ಷಕಿಯನ್ನು ಪುಷ್ಪಲತಾ ಎಂದು ಗುರುತಿಸಲಾಗಿದೆ. ಶಾಲೆಯಿಂದ ಶೈಕ್ಷಣಿಕ ಪ್ರವಾಸಕ್ಕೆ ತೆರಳಿದ್ದ ವೇಳೆ ಶಾಲಾ ಬಾಲಕನೊಂದಿಗೆ ಮುಖ್ಯ ಶಿಕ್ಷಕಿ ಅಸಭ್ಯವಾಗಿ ವರ್ತಿಸಿದ್ದು, ಇದೀಗ ಪೋಟೋಗಳು ಸೋರಿಕೆ ಆಗಿ ವಿದ್ಯಾರ್ಥಿ ಪೋಷಕರ ಆಕ್ರೋಶಕ್ಕೆ ಕಾರಣವಾಗಿದೆ.
ತಾನೊಬ್ಬ ಗುರು ಎಂಬುದನ್ನು ಮರೆತು ಶಾಲೆಯ ಮುಖ್ಯ ಶಿಕ್ಷಕಿ ಪುಷ್ಪಲತಾ ಶಾಲೆಯ ವಿದ್ಯಾರ್ಥಿಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾಳೆ. ಈ ವೇಳೆ ಬಾಲಕನೊಂದಿಗೆ ವಿವಿಧ ಭಂಗಿಗಳಲ್ಲಿ ಪೋಟೋ ತೆಗೆಸಿಕೊಂಡಿರುವ ಶಿಕ್ಷಕಿ, ವಿದ್ಯಾರ್ಥಿ ಕೂಡ ಶಿಕ್ಷಕಿಯರನ್ನು ಮುದ್ದಾಡಿದ್ದು, ಶಿಕ್ಷಕಿ ಕೂಡ ಬಾಲಕನಿಗೆ ಕಿಸ್ ಕೊಟ್ಟಿರುವ ಫೋಟೋಗಳು ಈಗ ಎಲ್ಲೆಡೆಯೂ ವೈರಲ್ ಆಗಿರುತ್ತದೆ.
ಇನ್ನು ಶಿಕ್ಷಕಿಯ ಈ ವರ್ತನೆ ಕುರಿತು ವಿದ್ಯಾರ್ಥಿಯ ಪೋಷಕರು ಕಿಡಿಕಾರಿದ್ದು, ಕೂಡಲೇ ಶಾಲೆಯ ಬಳಿ ತೆರಳಿ ಶಿಕ್ಷಕಿ ವಿರುದ್ಧ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ಘಟನೆಯ ಬಗ್ಗೆ ವಿದ್ಯಾರ್ಥಿಯ ಪೋಷಕರು ಕ್ಷೇತ್ರ ಶಿಕ್ಷಣಾಧಿಕಾರಿಗಳ ಗಮನಕ್ಕೆ ತಂದಿದ್ದಾರೆ ಎಂದು ತಿಳಿದು ಬಂದಿದೆ.