Saturday, June 6, 2026
Homeಕರಾವಳಿಮಂಗಳೂರು ವಿವಿ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಡಾ. ಯತೀಶ್ ಉಳ್ಳಾಲ್ ವರ್ಗಾವಣೆ

ಮಂಗಳೂರು ವಿವಿ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಡಾ. ಯತೀಶ್ ಉಳ್ಳಾಲ್ ವರ್ಗಾವಣೆ

- Advertisement -
- Advertisement -

ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಡಾ. ಯತೀಶ್ ಉಳ್ಳಾಲ್ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದೆ.

ಹಿರಿಯ ಶ್ರೇಣಿಯ ಕೆಎಎಸ್ ಅಧಿಕಾರಿಯಾಗಿರುವ ಯತೀಶ್ ಉಳ್ಳಾಲ್ ಈ ವರೆಗೆ ಮಡಿಕೇರಿ ಉಪ ವಿಭಾಗದ ಸಹಾಯಕ ಆಯುಕ್ತರಾಗಿ ಕಾರ್ಯನಿರ್ವಹಿಸುತ್ತಿದ್ದರು.

ಇದೇ ವೇಳೆ ಪುತ್ತೂರು ಉಪ ವಿಭಾಗದ ಸಹಾಯಕ ಆಯುಕ್ತರಾಗಿದ್ದ ಎಂ. ಗಿರೀಶ್ ನಂದನ್ ಅವರನ್ನು ಮಂಗಳೂರು ಮಹಾನಗರ ಪಾಲಿಕೆಯ ಕಂದಾಯ ಉಪ ಆಯುಕ್ತರನ್ನಾಗಿ ವರ್ಗಾಯಿಸಲಾಗಿದೆ.

ಇಂದು ಏಳು ಕೆಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ‌.

- Advertisement -

Latest News

error: Content is protected !!