Saturday, August 29, 2026
Homeಅಪರಾಧರಸ್ತೆ ದಾಟುತ್ತಿದ್ದ ವೇಳೆ ಬೈಕ್ ಢಿಕ್ಕಿ ಹೊಡೆದು ಪಾದಾಚಾರಿ ಸಾವು

ರಸ್ತೆ ದಾಟುತ್ತಿದ್ದ ವೇಳೆ ಬೈಕ್ ಢಿಕ್ಕಿ ಹೊಡೆದು ಪಾದಾಚಾರಿ ಸಾವು

- Advertisement -
- Advertisement -

ಸುಳ್ಯ: ಇಲ್ಲಿನ ಜಾಲೂರಿನಲ್ಲಿ ರಸ್ತೆ ದಾಟುತ್ತಿದ್ದ ವೇಳೆಗೆ ಪಾದಾಚಾರಿಯೋರ್ವರಿಗೆ ಬೈಕ್ ಢಿಕ್ಕಿ ಹೊಡೆದಿದ್ದು, ಗಂಭೀರವಾಗಿ ಗಾಯಕೊಂಡ ಅವರನ್ನು ಆಸ್ಪತ್ರೆಗೆ ಸಾಗಿಸುವ ವೇಳೆ ಸಾವನ್ನಪ್ಪಿದ ಘಟನೆ ಜಾಲೂರಿನಲ್ಲಿ ನಡೆದಿದೆ.

ಮೃತಪಟ್ಟ ವ್ಯಕ್ತಿ ದೇಲಂಪಾಡಿ ಗ್ರಾಮದ ಬೆಳ್ಳಿಪ್ಪಾಡಿ ದೇವರಗುಂಡ ಪುರುಷೋತ್ತಮ ಗೌಡ (72).

ಪುರುಷೋತ್ತಮ ಅವರು ಜಾಲ್ಲೂರಿನ ಅರಣ್ಯ ತಪಾಸಣಾ ಚೆಕ್ ಪೋಸ್ಟ್ ಬಳಿ ಮುಖ್ಯರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ಈ ಅವಘಡ ನಡೆದಿದ್ದು, ಪುತ್ತೂರು ಕಡೆಯಿಂದ ಬಂದ ಬೈಕ್ ಅವರಿಗೆ ಢಿಕ್ಕಿ ಹೊಡೆದಿರುತ್ತದೆ. ಈ ವೇಳೆಯಲ್ಲಿ ತಲೆಗೆ ಗಂಭೀರವಾಗಿ ಗಾಯಗೊಂಡ ಅವರನ್ನು ತಕ್ಷಣ ಸ್ಥಳೀಯರು ಸೇರಿ ರಿಕ್ಷಾದಲ್ಲಿ ಸುಳ್ಯ ಆಸ್ಪತ್ರೆಗೆ ಕರೆದೊಯ್ದು ಪ್ರಥಮ ಚಿಕಿತ್ಸೆ ಕೊಡಿಸಲಾಗಿದೆ. ನಂತರದಲ್ಲಿ ವೈದ್ಯರ ಸಲಹೆಯಂತೆ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ವೇಳೆ ದಾರಿ ಮಧ್ಯೆ ಕೊನೆಯುಸಿರೆಳೆದಿದ್ದಾರೆ.

- Advertisement -

Latest News

error: Content is protected !!