Saturday, June 6, 2026
Homeಅಪರಾಧರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಟ್ಯಾಂಕರ್ ಢಿಕ್ಕಿ; ಸ್ಥಳದಲ್ಲೇ ಮೃತ್ಯು

ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಟ್ಯಾಂಕರ್ ಢಿಕ್ಕಿ; ಸ್ಥಳದಲ್ಲೇ ಮೃತ್ಯು

- Advertisement -
- Advertisement -

ಕಾಪು: ಉದ್ಯಾವರದಲ್ಲಿ ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಟ್ಯಾಂಕರ್ ಢಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.

ಉಡುಪಿ ಕೆಸ್ತೂರು ನಿವಾಸಿ ಜಯ ದೇವಾಡಿಗ (64) ಮೃತ ವ್ಯಕ್ತಿ. ಅವರು ಪಿತ್ರೋಡಿಯ ಹೋಲೋ ಬ್ಲಾಕ್ ಸಂಸ್ಥೆಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಶನಿವಾರದಂದು ಸಂಜೆ ಕೆಲಸ ಮುಗಿಸಿ ಜಯ ದೇವಾಡಿಗ ಅವರು ಭಗವತಿ ಹಾರ್ಡ್‌ವೇರ್ ಮುಂಭಾಗದಲ್ಲಿ ರಸ್ತೆ ದಾಟುತ್ತಿದ್ದ ವೇಳೆ ಉಡುಪಿ ಕಡೆಗೆ ತೆರಳುತ್ತಿದ್ದ ಟ್ಯಾಂಕರ್ ಢಿಕ್ಕಿ ಹೊಡೆದಿದ್ದು, ಗಂಭೀರವಾಗಿ ಗಾಯಗೊಂಡ ಅವರು ಸ್ಥಳದಲ್ಲೇ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.

ಘಟನಾ ಸ್ಥಳಕ್ಕೆ ಕಾಪು ಪೊಲೀಸ್ ಠಾಣೆ ಮತ್ತು ಕಟಪಾಡಿ ಹೊರಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

- Advertisement -

Latest News

error: Content is protected !!