Monday, June 8, 2026
Homeಕರಾವಳಿಚಾಲಕನ ನಿಯಂತ್ರಣ ತಪ್ಪಿ ಚರಂಡಿ ಹತ್ತಿದ ಕಾರು; ಪ್ರಯಾಣಿಕರು ಅಲ್ಪಸ್ವಲ್ಪ ಗಾಯಗಳಿಂದ ಪಾರು

ಚಾಲಕನ ನಿಯಂತ್ರಣ ತಪ್ಪಿ ಚರಂಡಿ ಹತ್ತಿದ ಕಾರು; ಪ್ರಯಾಣಿಕರು ಅಲ್ಪಸ್ವಲ್ಪ ಗಾಯಗಳಿಂದ ಪಾರು

- Advertisement -
- Advertisement -

ಬಂಟ್ವಾಳ: ರಾಷ್ಟ್ರೀಯ ಹೆದ್ದಾರಿಯ ವಿಟ್ಲ ಪೋಲೀಸ್ ಠಾಣಾ ವ್ಯಾಪ್ತಿಯ ಮಾಣಿ ಸಮೀಪದ ಸೂರಿಕುಮೇರು ಎಂಬಲ್ಲಿ ಕಾರೊಂದು ಚಾಲಕನ ನಿಯಂತ್ರಣ ಕಳೆದುಕೊಂಡು ಚರಂಡಿ ಮೇಲೆ ಹತ್ತಿದ ಘಟನೆ ನಡೆದಿದೆ.

ಬೆಂಗಳೂರಿನಿಂದ ಮಂಗಳೂರು ಕಡೆಗೆ ಬರುತ್ತಿದ್ದ ಕಾರು ಹೆದ್ದಾರಿ ಬದಿ ಗುಡ್ಡ ಜರಿದು ಬೀಳದಂತೆ ಕಟ್ಟಲಾದ ತಡೆಗೋಡೆಗೆ ಗುದ್ದಿ, ಬಳಿಕ ಚರಂಡಿ ಮೇಲೆ ಹತ್ತಿದೆ.

ಘಟನೆಯಿಂದ ಕಾರು ಸಂಪೂರ್ಣ ಜಖಂಗೊಂಡಿದೆ. ಅದೃಷ್ಟವಶಾತ್ ಕಾರಿನೊಳಗೆ ಪ್ರಯಾಣಿಸುತ್ತಿದ್ದ ಪ್ರಯಾಣಿಕರು ಅಲ್ಪಸ್ವಲ್ಪ ಗಾಯಗಳಿಂದ ಪಾರಾಗಿದ್ದಾರೆ. ಗಾಯಗೊಂಡ ವ್ಯಕ್ತಿಗಳ ಮಾಹಿತಿ ಇನ್ನಷ್ಟೇ ತಿಳಿಯಬೇಕಾಗಿದೆ. ಚಾಲಕ ಸಹಿತ ಮೂವರು ಮಹಿಳೆಯರಿದ್ದು, ಎಲ್ಲರಿಗೂ ಸಣ್ಣಪುಟ್ಟ ಗಾಯಗಳಾಗಿವೆ.

- Advertisement -

Latest News

error: Content is protected !!