Thursday, June 4, 2026
Homeಅಪರಾಧರಿಕ್ಷಾವೊಂದು ಪಲ್ಟಿಯಾಗಿ ಚಾಲಕ ಗಂಭೀರ ಗಾಯ; ಆಸ್ಪತ್ರೆಗೆ ದಾಖಲು

ರಿಕ್ಷಾವೊಂದು ಪಲ್ಟಿಯಾಗಿ ಚಾಲಕ ಗಂಭೀರ ಗಾಯ; ಆಸ್ಪತ್ರೆಗೆ ದಾಖಲು

- Advertisement -
- Advertisement -

ಕಾರ್ಕಳ: ಆನೆಕೆರೆ ದಾನಶಾಲೆ ರಸ್ತೆಯಲ್ಲಿ ರಿಕ್ಷಾವೊಂದು ಪಲ್ಟಿಯಾಗಿ ಚಾಲಕನೋರ್ವ ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ.

ಖಾಸಗಿ ಬಸ್ಸೊಂದು ಕಾರ್ಕಳದಿಂದ ಆನೆಕೆರೆ ರಸ್ತೆಯಾಗಿ ಸಾಗುತ್ತಿದ್ದು, ಮುಂಭಾಗದಲ್ಲಿ ಬರುತ್ತಿದ್ದ ರಿಕ್ಷಾ ಚಾಲಕನ ನಿಯಂತ್ರಣ ತಪ್ಪಿ ಬಲಭಾಗದಲ್ಲಿನ ಮನೆಯೊಂದರ ಕಂಪೌಂಡ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ ಎಂದು ತಿಳಿದು ಬಂದಿದೆ.

ಘಟನೆಯ ಪರಿಣಾಮ ರಿಕ್ಷಾ ಚಾಲಕನು ತೀವ್ರವಾಗಿ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಕಾರ್ಕಳ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೆಚ್ಚಿನ ಚಿಕೆತ್ಸೆಗಾಗಿ ಅವರನ್ನು ಬೇರೊಂದು ಆಸ್ಪತ್ರೆಗೆ ಕರೆದೊಯ್ದಿದ್ದಾರೆ ಎನ್ನಲಾಗಿದೆ.

- Advertisement -

Latest News

error: Content is protected !!