- Advertisement -
- Advertisement -
ಮಂಗಳೂರು : ತುಳುನಾಡಿನ ಹಿರಿಯ ಸಾಹಿತಿ, ಹಿರಿಯ ಜಾನಪದ ವಿದ್ವಾಂಸ ಡಾ. ಅಮೃತ ಸೋಮೇಶ್ವರ(88) ಅವರು ವಯೋಸಹಜ ಕಾಯಿಲೆಯಿಂದ ಇಂದು ಬೆಳಗ್ಗೆ 9-30ಕ್ಕೆ ತಮ್ಮ ಸ್ವಗೃಹ ಸೋಮೇಶ್ವರದ ‘ಒಲುಮೆ’ಯಲ್ಲಿ ನಿಧನರಾದರು.
ದಕ್ಷಿಣ ಕನ್ನಡ ಜಿಲ್ಲೆಯ ಓರ್ವ ಹಿರಿಯ ಕನ್ನಡ, ತುಳು ಸಾಹಿತಿ, ಯಕ್ಷಗಾನ ಪ್ರಸಂಗಕರ್ತರಾಗಿದ್ದ ಇವರು, ಸಮಾಜಮುಖಿ ಚಂತನೆಯುಳ್ಳ ಓರ್ವ ಸಹೃದಯಿಯಾಗಿದ್ದರು.
ಅಮೃತ ಸೋಮೇಶ್ವರ ಅವರು ಕಾವ್ಯ, ಸಣ್ಣಕತೆ,ನಾಟಕ, ಯಕ್ಷಗಾನ, ವಿಮರ್ಶೆ ಮತ್ತು ಜಾನಪದ ಕ್ಷೇತ್ರದಲ್ಲಿ ವಿಶೇಷವಾಗಿ ಕೆಲಸ ಮಾಡಿದ್ದಾರೆ.ಅವರ ನಿಧನಕ್ಕೆ ಅನೇಕ ಗಣ್ಯರು ಕಂಬನಿ ಮಿಡಿದಿದ್ದಾರೆ.
ಸದ್ಯ ಮೃತದೇಹ ಆಸ್ಪತ್ರೆಯಲ್ಲಿದ್ದು 3 ಗಂಟೆಗೆ ಮನೆಗೆ ತರಲಾಗುತ್ತದೆ. ನಾಳೆ ಬೆಳಗ್ಗೆ 11 ಗಂಟೆಗೆ ಮನೆಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ.
- Advertisement -