Wednesday, June 3, 2026
Homeಕರಾವಳಿಉಡುಪಿಉಡುಪಿ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ವಿಪಕ್ಷ ನಾಯಕ ಅಶೋಕ್ ಸಭೆ

ಉಡುಪಿ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ವಿಪಕ್ಷ ನಾಯಕ ಅಶೋಕ್ ಸಭೆ

- Advertisement -
- Advertisement -

ಉಡುಪಿ: ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ಇಂದು ಉಡುಪಿ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಪದಾಧಿಕಾರಿಗಳು, ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಸಭೆ ನಡೆಸಿದರು.

ಲೋಕಸಭಾ ಚುನಾವಣಾ ಕಾರ್ಯತಂತ್ರಗಳ ಬಗ್ಗೆ ಚರ್ಚೆ ನಡೆಸಿದ ಅಶೋಕ್, ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಎಲ್ಲಾ 28 ಸ್ಥಾನಗಳನ್ನೂ ಬಿಜೆಪಿ ಗೆದ್ದು ಮತ್ತೊಮ್ಮೆ ನರೇಂದ್ರ ಮೋದಿಯವರನ್ನು ಪ್ರಧಾನಿಯನ್ನಾಗಿ ಮಾಡಲು ಕೇಂದ್ರ ಸರ್ಕಾರದ ಸಾಧನೆಗಳನ್ನು ಮನೆಮನೆಗೆ ತಲುಪಿಸಬೇಕೆಂದು ಕಾರ್ಯಕರ್ತರಿಗೆ ತಿಳಿಸಿದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ಭೈರತಿ ಬಸವರಾಜ್, ಎಸ್. ಮುನಿರಾಜು, ಯಶಪಾಲ್ ಸುವರ್ಣ, ಗುರ್ಮೆ ಸುರೇಶ್ ಶೆಟ್ಟಿ, ಕಿರಣಕುಮಾರ ಕೊಡ್ಗಿ, ಮಾಜಿ ಶಾಸಕ ರಘುಪತಿ ಭಟ್ ಮತ್ತು ಪಕ್ಷದ ಜಿಲ್ಲಾ ಪದಾಧಿಕಾರಿಗಳು ಉಪಸ್ಥಿತರಿದ್ದರು.

- Advertisement -

Latest News

error: Content is protected !!