Wednesday, June 3, 2026
Homeಕರಾವಳಿಮಂಗಳೂರಿನಲ್ಲಿ ಕೊರೊನಾಗೆ 49 ವರ್ಷದ ವ್ಯಕ್ತಿ ಬಲಿ, 18ಕ್ಕೇರಿದ ಸಾವಿನ ಸಂಖ್ಯೆ

ಮಂಗಳೂರಿನಲ್ಲಿ ಕೊರೊನಾಗೆ 49 ವರ್ಷದ ವ್ಯಕ್ತಿ ಬಲಿ, 18ಕ್ಕೇರಿದ ಸಾವಿನ ಸಂಖ್ಯೆ

- Advertisement -
- Advertisement -

ಮಂಗಳೂರು:  ದಕ್ಷಿಣಕನ್ನಡ ಜಿಲ್ಲೆಯಲ್ಲಿ  ಕೊರೋನಾಗೆ ಮತ್ತೊಂದು ಬಲಿಯಾಗಿದೆ. ಬಂಟ್ವಾಳ ತಾಲೂಕಿನ ಕಲ್ಕಡ್ಕ ನಿವಾಸಿ 49 ವರ್ಷದ ವ್ಯಕ್ತಿ ಕೊರೊನಾಗೆ ಬಲಿಯಾಗಿದ್ದಾರೆ. ಶನಿವಾರ ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಕಳೆದ 20 ದಿನಗಳಿಂದ ಮನೆಯಲ್ಲಿ ಅನಾರೋಗ್ಯದಿಂದ ಬಳಲುತ್ತಿದ್ದರು.  ಇನ್ನು ಮೃತ ವ್ಯಕ್ತಿ ಕಿಡ್ನಿ, ಟಿ.ಬಿ.ಹಾಗೂ ಲಿವರ್ ನ ಸಮಸ್ಯೆಯಿಂದಲೂ ಬಳಲುತ್ತಿದ್ದರು ಎನ್ನಲಾಗಿದೆ.

ಇನ್ನು ವ್ಯಕ್ತಿಯ ಗಂಟಲು ದ್ರವದ ಪರೀಕ್ಷೆ ನಡೆಸಿದಾಗ ಕೊರೊನಾ ಇರೋದು ದೃಢಪಟ್ಟಿದೆ. ಇವರ ಸಾವಿನ ಮೂಲಕ ದಕ್ಷಿಣ ಕನ್ನಡಲ್ಲಿ ಕೊರೊನಾಗೆ ಬಲಿಯಾದವರ ಸಂಖ್ಯೆ 18 ಕ್ಕೆ ಏರಿಕೆಯಾಗಿದೆ.

- Advertisement -

Latest News

error: Content is protected !!