Thursday, June 4, 2026
Homeಕರಾವಳಿಬಂಟ್ವಾಳ; ತಾಯಿ-ಮಗಳಿಗೆ ಚೂರಿ ತೋರಿಸಿ ಮುಸುಕುಧಾರಿಗಳಿಂದ ದರೋಡೆ

ಬಂಟ್ವಾಳ; ತಾಯಿ-ಮಗಳಿಗೆ ಚೂರಿ ತೋರಿಸಿ ಮುಸುಕುಧಾರಿಗಳಿಂದ ದರೋಡೆ

- Advertisement -
- Advertisement -

ಬಂಟ್ವಾಳ; ತಾಯಿ-ಮಗಳಿಗೆ ಚೂರಿ ತೋರಿಸಿ ಮುಸುಕುಧಾರಿಗಳು ಚಿನ್ನಾಭರಣ ಹಾಗೂ ಹಣ ದರೋಡೆ ಮಾಡಿರುವ ಘಟನೆ ಬಂಟ್ವಾಳ ತಾಲೂಕಿನ ವಗ್ಗದಲ್ಲಿ ನಡೆದಿದೆ.

ಇಂದು ಬೆಳಗ್ಗೆ 6-30 ರ ವೇಳೆಗೆ ವಗ್ಗ ಸಮೀಪದ ಅಂಚಿಕಟ್ಟೆ ಸಾಲುಮರ ತಿಮ್ಮಕ್ಕನ ಟ್ರೀ ಪಾರ್ಕ್ ಮುಂಭಾಗದಲ್ಲಿ ರುವ ಪ್ಲೋರಿನ್ ಪಿಂಟೋ ಅವರ ಹೊಸ ಮನೆಗೆ ಅವರ ತಾಯಿ ಹಾಗೂ ಮಗಳು ಮರೀನಾ ಪಿಂಟೋ ಇದ್ದಾಗ ಯಾರು ಬೆಲ್ ಮಾಡಿದ್ದಾರೆ. ಬಾಗಿಲು ತೆರೆದಾಗ ಒಳಗೆ ನುಗ್ಗಿದ ಮುಸುಕುಧಾರಿ ದರೋಡೆಕೋರರು ಚಾಕು ತೋರಿಸಿ ಬೆದರಿಕೆ ಹಾಕಿದ್ದಾರೆ.

ಈ ವೇಳೆ ಕಪಾಟಿನಲ್ಲಿದ್ದ ಸುಮಾರು 2.90 ಲಕ್ಷ ರೂಮೌಲ್ಯದ ಚಿನ್ನ, 30 ಸಾವಿರ ನಗದು ಕಳವು ಮಾಡಿದ್ದಾರೆ. ತಡೆಯಲು ಬಂದ ಮರೀನಾ ಪಿಂಟೋ ಅವರ ಕೈಗೆ ಗಾಯವಾಗಿದೆ.ಸ್ಥಳಕ್ಕೆ ಎಸ್ಪಿ ರಿಷ್ಯಂತ್, ಗ್ರಾಮಾಂತರ ಇನ್ಸ್ ಪೆಕ್ಟರ್ ಶಿವಕುಮಾರ್, ಶ್ವಾನ ದಳ ಬೆರಳಚ್ಚು ತಜ್ಞರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ,

- Advertisement -

Latest News

error: Content is protected !!