Thursday, June 4, 2026
Homeತಾಜಾ ಸುದ್ದಿಲೋಕಸಭಾ ಚುನಾವಣೆಗೆ ಬಿಜೆಪಿ ಕ್ಷೇತ್ರ ಉಸ್ತುವಾರಿಗಳ ನೇಮಕ

ಲೋಕಸಭಾ ಚುನಾವಣೆಗೆ ಬಿಜೆಪಿ ಕ್ಷೇತ್ರ ಉಸ್ತುವಾರಿಗಳ ನೇಮಕ

- Advertisement -
- Advertisement -

ಮಂಗಳೂರು: ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಚುನಾವಣಾ ಉಸ್ತುವಾರಿಯಾಗಿ ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ನೇಮಿಸಲಾಗಿದೆ. ಸಂಚಾಲಕರಾಗಿ ನಿತಿನ್ ಕುಮಾರ್ ನೇಮಕಗೊಂಡಿದ್ದಾರೆ.

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಉಸ್ತುವಾರಿಯಾಗಿ ಮಾಜಿ ಗೃಹ ಸಚಿವ ಮತ್ತು ಶಾಸಕ ಅರಗ ಜ್ಞಾನೇಂದ್ರ ಅವರನ್ನು ನೇಮಿಸಲಾಗಿದ್ದು, ಸಂಚಾಲಕರಾಗಿ ಕುತ್ಯಾರು ನವೀನ್ ಶೆಟ್ಟಿ ಮತ್ತು ರವೀಂದ್ರ ಬೆಳವಾಡಿ ಅವರಿಗೆ ಜವಾಬ್ದಾರಿ ನೀಡಲಾಗಿದೆ.

ಇನ್ನು ಉಡುಪಿಯ ಮಾಜಿ ಶಾಸಕ ರಘುಪತಿ ಭಟ್ ಅವರನ್ನು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಮತ್ತು ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಅವರನ್ನು ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಉಸ್ತುವಾರಿಗಳನ್ನಾಗಿ ನೇಮಿಸಲಾಗಿದೆ.

28 ಲೋಕಸಭಾ ಕ್ಷೇತ್ರಗಳಿಗೂ ಚುನಾವಣಾ ಉಸ್ತುವಾರಿಗಳು ಮತ್ತು ಸಂಚಾಲಕರನ್ನು ನೇಮಿಸಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆದೇಶ ಹೊರಡಿಸಿದ್ದಾರೆ.

- Advertisement -

Latest News

error: Content is protected !!