Friday, June 5, 2026
Homeಕರಾವಳಿಉಡುಪಿಬೆಳಗಾವಿಯಲ್ಲಿ ಸಿಲಿಂಡರ್ ಸ್ಫೋಟದಲ್ಲಿ ಉಡುಪಿ ಮೂಲದ ಇಬ್ಬರು ಸಾವು, ಇಬ್ಬರ ಸ್ಥಿತಿ ಗಂಭೀರ

ಬೆಳಗಾವಿಯಲ್ಲಿ ಸಿಲಿಂಡರ್ ಸ್ಫೋಟದಲ್ಲಿ ಉಡುಪಿ ಮೂಲದ ಇಬ್ಬರು ಸಾವು, ಇಬ್ಬರ ಸ್ಥಿತಿ ಗಂಭೀರ

- Advertisement -
- Advertisement -

ಬೆಳಗಾವಿ: ನಿನ್ನೆ ಸಂಜೆ
ಬೆಳಗಾವಿಯಲ್ಲಿ ಸಂಭವಿಸಿದ್ದ ಗ್ಯಾಸ್ ಸಿಲಿಂಡರ್ ಸ್ಫೋಟ ಪ್ರಕರಣದಲ್ಲಿ ಗಾಯಗೊಂಡಿದ್ದ ಉಡುಪಿ ಮೂಲದ ಇಬ್ಬರು ಇಂದು ಸಾವನ್ನಪ್ಪಿದ್ದಾರೆ.

ಬೆಳಗಾವಿ ನಗರದ ಬಸವನ ಗಲ್ಲಿಯಲ್ಲಿರುವ ಅಪಾರ್ಟ್ ಮೆಂಟ್ ನಲ್ಲಿ ನಡೆದಿದ್ದ ಅವಘಡದಲ್ಲಿ ಒಂದೇ ಕುಟುಂಬದ ಐವರು ಗಂಭೀರವಾಗಿ ಗಾಯಗೊಂಡಿದ್ದರು.

ಉಡುಪಿ ಮೂಲದ ಕಾಮಾಕ್ಷಿ ಭಟ್(80) ಮತ್ತು ಹೇಮಂತ್ ಭಟ್(27) ಮೃತಪಟ್ಟಿದ್ದು, ಇನ್ನೂ ಇಬ್ಬರು ಸ್ಥಿತಿ ಚಿಂತಾಜನಕವಾಗಿದೆ.

ಉಳಿದ ಮೂವರು ಗಾಯಾಳುಗಳು ಬೆಳಗಾವಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮನೆಯಲ್ಲಿ ಗ್ಯಾಸ್ ಸಿಲಿಂಡರ್ ಸೋರಿಕೆಯಿಂದಾಗಿ ನಿನ್ನೆ ಸಂಜೆ ಸ್ಫೋಟ ಸಂಭವಿಸಿತ್ತು. ಕುಟುಂಬ ಸದಸ್ಯರ ಪೈಕಿ ಓರ್ವ ಮನೆಯಿಂದ ಹೊರಗೆ ತೆರಳಿದ್ದ ಕಾರಣ ಪಾರಾಗಿದ್ದಾರೆ.

ಖಡೇಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ‌.

- Advertisement -

Latest News

error: Content is protected !!