Saturday, June 6, 2026
Homeಕರಾವಳಿರೈಲು ಡಿಕ್ಕಿಯಾಗಿ ಕೂಲಿ ಕಾರ್ಮಿಕ ಸಾವು

ರೈಲು ಡಿಕ್ಕಿಯಾಗಿ ಕೂಲಿ ಕಾರ್ಮಿಕ ಸಾವು

- Advertisement -
- Advertisement -

ಬಂಟ್ವಾಳ: ಬಿ.ಸಿ.ರೋಡು ಸಮೀಪದ ಮಾರ್ನಬೈಲು ಎಂಬಲ್ಲಿ ಇಂದು ಬೆಳಿಗ್ಗೆ ಸುಮಾರು 7.30 ಗಂಟೆಯ ಹೊತ್ತಿಗೆ ಕೂಲಿ ಕಾರ್ಮಿಕರೊಬ್ಬರಿಗೆ ರೈಲು ಡಿಕ್ಕಿ ಹೊಡೆದಿದ್ದು, ಕಾರ್ಮಿಕ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಮೃತಪಟ್ಟ ಕಾರ್ಮಿಕ ಸಜೀಪಮುನ್ನೂರು ಗ್ರಾ.ಪಂ.ವ್ಯಾಪ್ತಿಯ ಮಾರ್ನಬೈಲು ದಾಸರ ಗುಡ್ಡೆ ನಿವಾಸಿ ಹರಿಶ್ಚಂದ್ರ (37). ಮೂಲತಃ ಮಡಂತ್ಯಾರು ಪಣಕಜೆ ನಿವಾಸಿ

ಹರಿಶ್ಚಂದ್ರ ವೃತ್ತಿಯಲ್ಲಿ ಕೂಲಿ ಕಾರ್ಮಿಕರಾಗಿದ್ದು, ಅವರು ಇಂದು ಬೆಳಿಗ್ಗೆ ಮನೆಯಿಂದ ಕೆಲಸಕ್ಕೆ ತೆರಳುವ ಸಂದರ್ಭದಲ್ಲಿ ರೈಲ್ವೆ ಹಳಿಯನ್ನು ದಾಟುವ ಉದ್ದೇಶದಿಂದ ನಿಂತಿದ್ದರು. ಈ ವೇಳೆಗೆ ಬಂದ ರೈಲು ಡಿಕ್ಕಿ ಹೊಡೆದಿರಬೇಕು ಎಂದು ಸ್ಥಳೀಯರು ತಿಳಿಸಿದ್ದಾರೆ. ರೈಲು ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡ ಹರಿಶ್ಚಂದ್ರ ಸ್ಥಳದಲ್ಲಿಯೇ ಮೃತಪಟ್ಟಿದ್ದರು. ಡಿಕ್ಕಿಯಾದ ಕೂಡಲೇ ರೈಲ್ವೆ ಇಲಾಖೆಯ ಹಳಿಯ ಕಾಮಗಾರಿ ನೋಡಿಕೊಳ್ಳುವ ಸಿಬ್ಬಂದಿಗಳಿಗೆ ಮಾಹಿತಿ ಸಿಕ್ಕಿದ್ದು, ಅವರು ಮಂಗಳೂರು ರೈಲ್ವೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎಂದು ತಿಳಿದು ಬಂದಿದೆ.

ಇನ್ನು ಘಟನಾ ಸ್ಥಳಕ್ಕೆ ಆಗಮಿಸಿದ್ದ ರೈಲ್ವೆ ಪೋಲೀಸ್ ಇಲಾಖೆಯ ಎ.ಎಸ್.ಐ.ಜಾನ್ ಕೊರಿಯ ಕೋಸ್ ಅವರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಸಾಗಿಸಿದ್ದಾರೆ.

- Advertisement -

Latest News

error: Content is protected !!